ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ನಾಳೆ ಬಸವೇಶ್ವರ ದೇಗುಲ ಪುನರ್ ಪ್ರತಿಷ್ಠಾಪನಾ ಮಹೋತ್ಸವ

Vishwanath S
Updated On : 8 Feb 2014, 12:38 pm

ಮಾಗಡಿ: ತಾಲೂಕಿನ ಕಸಬಾ ಹೋಬಳಿ, ಬೆಳಗುಂಬ ಪಂಚಾಯ್ತಿ ವ್ಯಾಪ್ತಿಯ ಬ್ಯಾಡರಹಳ್ಳಿಯಲ್ಲಿ ಶ್ರೀ ಬಸವೇಶ್ವರ ಯುವಕರ ಜೀಣೋದ್ಧಾರ ಸಮಿತಿ ವತಿಯಿಂದ ಫೆ.9 ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಅದ್ಧೂರಿ  ಬಸವೇಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಹಾಗೂ ನೂತನ ದೇವಾಲಯ ಉದ್ಘಾಟನಾ ಸಮಾರಂಭ, ಗುರುವಂದನೆ, ಗ್ರಾಮಾಂತರ ಬಸವ ಜಯಂತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಜೀಣೋದ್ಧಾರ ಸಮಿತಿ ತಿಳಿಸಿದೆ.
ಸಿದ್ದಗಂಗಾ ಕ್ಷೇತ್ರದ ಮಠಾಧ್ಯಕ್ಷ ಡಾ. ಶಿವಕುಮಾರಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಕನಕಪುರ ದೇಗುಲ ಮಠದ ಮುಮ್ಮಡಿ ನಿರ್ವಾಣ ಮಹಾಸ್ವಾಮಿ, ಸಿದ್ಧಗಂಗಾ ಮಠದ ಕಿರಿಯ ಶ್ರೀ ಸಿದ್ದಲಿಂಗಸ್ವಾಮೀಜಿ  ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗೋಪುರದ ಶಂಕುಸ್ಥಾಪನೆ ನೆರವೇರಿಸಲಿದ್ದು, ಶಾಸಕ ಎಚ್.ಸಿ. ಬಾಲಕೃಷ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಸನ್ಮಾನಿತರು: ಸಮಾಜ ಸೇವಕ ಕೆ. ಬಾಗೇಗೌಡ, ಕೆಪಿಸಿಸಿ ಸದಸ್ಯ ಎ.ಮಂಜು, ಕೆಂಪೇಗೌಡ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್.ಎಂ. ಕೃಷ್ಣಮೂರ್ತಿ, ಜಿ.ಪಂ.ಮಾಜಿ ಸದಸ್ಯ ಶಿವರುದ್ರಪ್ಪ,ಎಸ್.ಭಗೀರಥ, ವಿಜಯಕುಮಾರ್ ಇತರರನ್ನು ಸನ್ಮಾನಿಸುವುದಾಗಿ ಗುತ್ತಿಗೆದಾರ ರೇಣುಕಪ್ಪ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement