ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

15ರಂದು ಚನ್ನಪಟ್ಟಣ ತಾಲೂಕು ತೃತೀಯ ಕನ್ನಡ ಸಾಹಿತ್ಯ ಸಮ್ಮೇಳನ

Srinivasa Murthy VN
Updated On : 12 Feb 2014, 12:40 pm

ರಾಮನಗರ: ಚನ್ನಪಟ್ಟಣ ತಾಲೂಕಿನ ತೃತೀಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಫೆ.15ರಂದು ಪಟ್ಟಣದ ಪುರಭವನದ ಆವರಣದಲ್ಲಿ ನಡೆಯಲಿದೆ. ಗೋವಿಂದಹಳ್ಳಿ ದೇವೇಗೌಡ ಅವರನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಅಂದು ಬೆಳಗ್ಗೆ 8ಕ್ಕೆ ತಹಸೀಲ್ದಾರ್ ಶಿವರುದ್ರಪ್ಪ ರಾಷ್ಟ್ರ ಧ್ವಜಾರೋಹಣ ಹಾಗೂ ಕಸಾಪ ತಾಲೂಕು ಅಧ್ಯಕ್ಷ ಎಂ. ಶಿವಮಾದು ಅವರು ಪರಿಷತ್ತಿನ ಧ್ವಜಾರೋಹಣ ಮಾಡುವರು.
ಬೆಳಗ್ಗೆ 8.45ಕ್ಕೆ ಪಂಚದೀಪ ವೃತ್ತದಿಂದ ಹೊರಟು ಪುರಭವನದ ವೇದಿಕೆವರೆಗೆ ಸಮ್ಮೇಳನಾಧ್ಯಕ್ಷರನ್ನು ಮೆರವಣಿಗೆಯಲ್ಲಿ ತರಲಾಗುವುದು. ಬೆಳಗ್ಗೆ 10.30ಕ್ಕೆ ನಡೆಯುವ ವೇದಿಕೆ ಕಾರ್ಯಕ್ರಮವನ್ನು ಚನ್ನಪಟ್ಟಣದ ವಿರಕ್ತ ಮಠದ ಶ್ರೀ ಶಿವರುದ್ರ ಮಹಾಸ್ವಾಮಿ ಸಾನ್ನಿಧ್ಯ ವಹಿಸುವರು. ತಾಲೂಕು ಕಸಾಪ ಅಧ್ಯಕ್ಷ ಎಂ.ಶಿವಮಾಧು ಆಶಯ ನುಡಿಗಳನ್ನಾಡುವರು. ಇಂಧನ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಉದ್ಘಾಟಿಸುವರು. ಶಾಸಕ ಸಿ.ಪಿ.ಯೋಗೇಶ್ವರ್ ಅಧ್ಯಕ್ಷತೆ ವಹಿಸುವರು. ಸಾಹಿತಿ ಡಾ.ಸಾ.ಶಿ.ಮರುಳಯ್ಯ ಹಾಗೂ ಡಾ.ಎಲ್.ಹನುಮಂತಯ್ಯ,
ಸು.ತ.ರಾಮೇಗೌಡ, ಸಮ್ಮೇಳನಾಧ್ಯಕ್ಷ ಗೋವಿಂದಹಳ್ಳಿ ದೇವೇಗೌಡ ಭಾಗವಹಿಸುವರು.
ಮಧ್ಯಾಹ್ನ 12.30ಕ್ಕೆ ಕವಿಗೋಷ್ಠಿ, 2.15ಕ್ಕೆ ವಿಚಾರಗೋಷ್ಠಿ, ಸಂಜೆ 4.15ಕ್ಕೆ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ, 5.15ಕ್ಕೆ ಬಹಿರಂಗ ಅಧಿವೇಶನ ನಡೆಯಲಿದೆ. ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು ಸಂಜೆ 6ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ವಾಟಾಳ್ ನಾಗರಾಜ್ ಭಾಗವಹಿಸುವರು. ಸಂಸದ ಡಿ.ಕೆ.ಸುರೇಶ್ ಹಾಗೂ ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement