ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಮತದಾರರ ಪಟ್ಟಿಯಲ್ಲಿ ಹೆಸರು ಇದೆಯೇ?

Rashmi Kasaragodu
Updated On : 19 Feb 2014, 2:05 am

ರಾಮನಗರ: ನಾಗರಿಕರು ಮತದಾರರ ಗುರುತಿನ ಚೀಟಿ ಹೊಂದಿದ ಮಾತ್ರಕ್ಕೆ ಚುನಾವಣೆಯಲ್ಲಿ ಮತ ಚಲಾಯಿಸಲು ಸಾಧ್ಯವಿಲ್ಲ. ಅವರ ಹೆಸರು ಸಂಬಂಧಿಸಿದ ಮತದಾರರ ಪಟ್ಟಿಯಲ್ಲಿ ಇದ್ದರೆ ಮಾತ್ರ ತಮ್ಮ ಹಕ್ಕು ಚಲಾಯಿಸಬಹುದು. ಆದ್ದರಿಂದ ಗುರುತಿನ ಚೀಟಿ ಹೊಂದಿರುವರು ತಮ್ಮ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೇ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬೇಕು.
ಪರಿಷ್ಕೃತ ಮತದಾರರ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದ್ದು, ಸಂಬಂಧಿಸಿದ ತಾಲೂಕು ಕಚೇರಿ, ವಾರ್ಡ್ ಕಚೇರಿ ಹಾಗೂ ಮುಖ್ಯ ಚುನಾವಣಾಧಿಕಾರಿಗಳ ವೆಬ್‌ಸೈಟ್‌ನಲ್ಲಿ ಮತದಾರರ ಪಟ್ಟಿಯು ಲಭ್ಯವಿರುತ್ತದೆ. ಮತದಾರರು ಈ ಕಚೇರಿಗೆ ತೆರಳಿ, ಅಥವಾ ವೆಬ್‌ಸೃಟ್ ಮೂಲಕ ಅಥವಾ ಉಚಿತ ದೂರವಾಣಿ ಸಂಖ್ಯೆ 1950ಕ್ಕೆ ಕರೆ ಮಾಡಿ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿರುವುದನ್ನ ಖಚಿತಪಡಿಸಿಕೊಳ್ಳಬಹುದು.
ನಾಗರಿಕರು ತಮ್ಮ ವಾಸಸ್ಥಳವನ್ನು ಬದಲಾಯಿಸಿದ್ದು, ಈ ಹಿಂದೆ ನೋಂದಾಯಿಸಿಕೊಂಡ ವಿಳಾಸದಲ್ಲಿ ವಾಸವಿರದಿದ್ದರೆ ಮನೆಮನೆಗೆ ಭೇಟಿ ನೀಡಿ, ಪರಿಶೀಲಿಸಿದ ಸಂದರ್ಭದಲ್ಲಿ ಅಂತಹವರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲಾಗಿರುತ್ತದೆ. ನಿವಾಸ ಬದಲಿಸಿದವರು ತಮ್ಮ ಹೊಸ ನಿವಾಸ ಸ್ಥಳದ ಮತದಾರರ ಪಟ್ಟಿಯಲ್ಲಿ
ತಮ್ಮ ಹೆಸರು ಸೇರ್ಪಡೆ ಮಾಡಲು ಅರ್ಜಿ ನಮೂನೆ-6ನ್ನು ಭರ್ತಿ ಮಾಡಿ ಸೇರ್ಪಡೆಗೊಳಿಸಿಕೊಳ್ಳಬೇಕಿದೆ.
ಜನವರಿ 2014ಕ್ಕೆ 18 ವರ್ಷ ಪೂರ್ಣಗೊಂಡ ಎಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಲು ಅರ್ಹರಾಗಿದ್ದು, ಅರ್ಜಿ ನಮೂನೆ-6ನ್ನು ಭರ್ತಿ ಮಾಡಿ ವಿಳಾಸ ಹಾಗೂ ವಯಸ್ಸಿನ ದೃಢೀಕೃತ ದಾಖಲೆಗಳೊಂದಿಗೆ ಸಂಬಂಧಪಟ್ಟ ನೋಂದಣಾಧಿಕಾರಿ (ಇಆರ್‌ಓ) ಕಚೇರಿಗೆ ಸಲ್ಲಿಸಬೇಕು ಅಥವಾ ಆನ್‌ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದು.
ಮತದಾರರ ಗುರುತಿನ ಚೀಟಿ ಹೊಂದಿರುವವರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ದೃಢಪಡಿಸಿಕೊಳ್ಳುವಂತೆ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement