ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ದೊಡ್ಡಬಳ್ಳಾಪುರ ಪಿಎಲ್‌ಡಿ ಬ್ಯಾಂಕ್‌ಗೆ ವೆಂಕಟೇಶ್ ಬಾಬು ಅಧ್ಯಕ್ಷ

Rashmi Kasaragodu
Updated On : 21 Feb 2014, 1:46 am

ದೊಡ್ಡಬಳ್ಳಾಪುರ: ತಾಲೂಕಿನ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಎಸ್.ಎಲ್. ವೆಂಕಟೇಶ್‌ಬಾಬು ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಿಎಲ್‌ಡಿ ಬ್ಯಾಂಕ್ ತಾಲೂಕಿನ ಸಹಕಾರ ಕ್ಷೇತ್ರದಲ್ಲಿ ತನ್ನದೇ ಆದ ಗಣನೀಯ ಪಾತ್ರವನ್ನು ಮೊದಲಿನಿಂದಲೂ ನಿರ್ವಹಿಸಿಕೊಂಡು ಬರುತ್ತಿದೆ. ಕೃಷಿಕರಿಗೆ ಹಲವು ರೀತಿಯಲ್ಲಿ ಸಹಕಾರ ನೀಡುವ ಮತ್ತು ಅವರ ಆರ್ಥಿಕ ಬೆಳವಣಿಗೆಗೆ ಪೂರಕವಾದ ಯೋಜನೆಗಳ ಮೂಲಕ ಸಹಕಾರ ತತ್ವದಡಿಯಲ್ಲಿ ಮಾದರಿ ಬ್ಯಾಂಕ್ ಆಗಿ ರೂಪಗೊಂಡಿದೆ. ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ಬ್ಯಾಂಕಿನ ಅಭ್ಯುದಯಕ್ಕೆ ಶ್ರಮಿಸಲಾಗುವುದು ಎಂದರು. ನೂತನ ಅಧ್ಯಕ್ಷರನ್ನು ದೊಡ್ಡಬಳ್ಳಾಪುರ ಶಾಸಕ ಟಿ.ವೆಂಕಟರಮಣಯ್ಯ, ದೇವನಹಳ್ಳಿ ಕ್ಷೇತ್ರದ ಶಾಸಕ ಪಿಳ್ಳಮುನಿಶಾಮಪ್ಪ, ಮಾಜಿ ಶಾಸಕ ಜೆ.ನರಸಿಂಹಸ್ವಾಮಿ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಎನ್.ಹನುಮಂತೇಗೌಡ, ಪಿಎಲ್‌ಡಿ ಬ್ಯಾಂಕಿನ ಮಾಜಿ ಅಧ್ಯಕ್ಷ ಬಿ.ಸಿ.ನಾರಾಯಣಸ್ವಾಮಿ ಮತ್ತಿತರರು ಅಭಿನಂದಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement