ನಮೋ ಟೀ ಸ್ಟಾಲ್ಗೆ ಚಾಲನೆ
ಕನಕಪುರ: ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ದೇಶವನ್ನು ದಿವಾಳಿ ಅಂಚಿಗೆ ತಂದಿಟ್ಟಿದೆ. ಭ್ರಷ್ಟಾಚಾರ ಮುಕ್ತ ದೇಶದ ನಿರ್ಮಿತಿ ಭಾರತೀಯ ಜನತಾ ಪಕ್ಷದಿಂದ ಮಾತ್ರ ಸಾಧ್ಯ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ನಾಗರಾಜು ಅಭಿಪ್ರಾಯಪಟ್ಟರು.
ಕನಕಪುರ ತಾಲೂಕು ಹಾರೋಹಳ್ಳಿ ಗ್ರಾಮದಲ್ಲಿ ಚಾಯ್ ಪೇ ಚರ್ಚಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಮುನಿರಾಜು ಮಾತನಾಡಿದರು.
ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ನಮೋ ಟೀ ಸ್ಟಾಲ್ ಉದ್ಘಾಟನೆಯನ್ನು ಜಿಲ್ಲಾ ಮುಖಂಡ ಮುರಳೀಧರ ನೆರವೇರಿಸಿದರು. ಬಿಜೆಪಿ ಮುಖಂಡರಾದ ಬಾಲಾಜಿ ಸಿಂಗ್ ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.