ಪವಾಡ ರಹಸ್ಯ ಬಯಲು ಕಾರ್ಯಕ್ರಮ
ಕನಕಪುರ: ಕನಕಪುರದ ದೊಡ್ಡಾಲಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸರ್ ಸಿ.ವಿ.ರಾಮನ್ ವಿಜ್ಞಾನ ಕೇಂದ್ರದ ಆಶ್ರಯದಲ್ಲಿ ಪವಾಡ ರಹಸ್ಯ ಬಯಲು ಕಾರ್ಯಕ್ರಮ ನಡೆಯಿತು. ಹೆಸರಾಂತ ಪವಾಡ ಭಂಜಕ ಅರಸೀಕೆರೆ ಸರ್ಕಾರಿ ಪಪೂ ಕಾಲೇಜು ಉಪನ್ಯಾಸಕ ಎನ್.ಆರ್.ಸ್ವಾಮಿ 20 ಕ್ಕೂ ಹೆಚ್ಚು ಪವಾಡಗಳ ಹೆಸರಿನಲ್ಲಿ ನಡೆವ ಮೋಸ ವಂಚನೆಗಳನ್ನು ಪ್ರಾತ್ಯಕ್ಷಿಕೆ ಮೂಲಕ ಅನಾವರಣಗೊಳಿಸಿದರು. ಮುಖ್ಯ ಶಿಕ್ಷಕ ಪರಶಿವಮೂರ್ತಿ ಅಧ್ಯಕ್ಷತೆ ವಹಿಸಿದ್ದರು.
ಗ್ರಾಪಂ ಅಧ್ಯಕ್ಷ ಪವಿತ್ರಾ ಮಧುಸೂದನ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಪಾಲ್ಗೊಂಡಿದ್ದರು. ಉಪನ್ಯಾಸಕ ಮಹದೇವ್ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಶಿಕ್ಷಕಿ ಸೌಮ್ಯನಾಯ್ಕ ವಂದಿಸಿದರು.