ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಶ್ರೀ ಮುಕ್ತನಾಥೇಶ್ವರಗೆ ವಿಶೇಷ ಪೂಜೆ

Rashmi Kasaragodu
Updated On : 28 Feb 2014, 1:38 am

ನೆಲಮಂಗಲ: ತಾಲೂಕಿನ  ಬಿನ್ನಮಂಗಲದ ಶ್ರೀ ಮುಕ್ತನಾಥೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಹಬ್ಬದ  ಪ್ರಯುಕ್ತ ಗುರುವಾರ ಪೂಜೆ ಏರ್ಪಡಿಸಲಾಗಿತ್ತು.
ಶ್ರೀ ಮುಕ್ತನಾಥೇಶ್ವರ  ದೇವಾಲಯ ವಿಶೇಷ ಅಲಂಕರಾಗೊಂಡಿತ್ತು. ಅಭಿಷೇಕ ಸೇರಿದಂತೆ ವಿವಿಧ ಪೂಜಾ ಕಾರ್ಯಗಳನ್ನು ನಡೆಸಿ, ಬಂದ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.  ದಕ್ಷಿಣಕಾಶಿ ಶಿವಗಂಗೆಯಲ್ಲಿನ ಶ್ರೀ ಗಂಗಾಧರೇಶ್ವರ ಮತ್ತು ಹೊನ್ನಾದೇವಿ ದೇವಾಲಯಗಳಲ್ಲಿ ಸಾವಿರಾರು ಭಕ್ತರು ಮುಂಜಾನೆಯಿಂದಲೇ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ತಮ್ಮ ಭಕ್ತಿಯನ್ನು ಸಲ್ಲಿಸಿದರು.
ಬರುವ ಭಕ್ತರಿಗಾಗಿ ಸೇವಾ ಸಮಿತಿಗಳು ಅನುಕೂಲಗಳನ್ನು ಕಲ್ಪಿಸಿ ಪೂಜೆ ಪುನಸ್ಕಾರಗಳಿಗೆ ಸಹಕಾರ ನೀಡಿದರು. ತಾಲೂಕಿನ  ನಾನಾ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಮಂದಿ  ಭಕ್ತಾದಿಗಳು ಶ್ರೀಸ್ವಾಮಿಗೆ ಹಣ್ಣು-ಕಾಯಿ ಅರ್ಪಿಸುವ ಮೂಲಕ ಭಕ್ತಿಭಾವ ಮರೆದರು. ಪಟ್ಟಣದಲ್ಲಿರುವ ಶ್ರೀ ಕಾಶಿವಿಶ್ವನಾಥ ಸ್ವಾಮಿ ದೇವಾಲಯ , ಶ್ರೀ ರುದ್ರೇಶ್ವರ ಸ್ವಾಮಿ ದೇವಾಲಯ, ಶ್ರೀ ಮಹಾಲಿಂಗೇಶ್ವರ ಸ್ವಾಮಿ ದೇವಾಲಯ,  ಶ್ರೀ ಶನೇಶ್ವರ ಸ್ವಾಮಿ ದೇವಾಲಯಗಳಲ್ಲಿ ದೇವರ ದರ್ಶನಕ್ಕಾಗಿ ಸರದಿ ಸಾಲಿನಲ್ಲಿ ನಿಂತು ಭಕ್ತರು ಪೂಜೆ ಸಲ್ಲಿಸಿ ದರ್ಶನ ಭಾಗ್ಯ ಪಡೆದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement