ಎನ್ನೆಸ್ಸೆಸ್ ಸೇವಾ ಚಟುವಟಿಕೆ ಸಮಾರೋಪ ಸಮಾರಂಭ
ದೊಡ್ಡಬಳ್ಳಾಪುರ: ಇಲ್ಲಿಗೆ ಸಮೀಪದ ಮಾರಸಂದ್ರದಲ್ಲಿರುವ ಪಿಕೆಬಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ ವಿವಿಧ ಚಟುವಟಿಕೆಗಳ ಮುಕ್ತಾಯ ಸಮಾರಂಭ ಕಾಲೇಜು ಆವರಣದಲ್ಲಿ ನಡೆಯಿತು.
ಪ್ರಾಂಶುಪಾಲ ಟಿ.ಎ.ಕರಗಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಬಾರಿ ಕಾಲೇಜಿನಲ್ಲಿ ಎನ್ಎಸ್ಎಸ್ ಅಡಿಯಲ್ಲಿ ವಿವಿಧ ಸೇವಾ ಕಾರ್ಯಗಳು, ಶ್ರಮದಾನ, ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳು, ಸೇವಾ ಶಿಬಿರ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದರು.
ಪ್ರಸಕ್ತ ಸಾಲಿನ ಅತ್ಯುತ್ತಮ ಸ್ವಯಂ ಸೇವಕ ಪ್ರಶಸ್ತಿಯನ್ನು ವಿದ್ಯಾರ್ಥಿ ಅರುಣ್ಕುಮಾರ್ ಮತ್ತು ಉಮೈರ್ಬಾನು, ಅಂಜು ಅವರಿಗೆ ನೀಡಲಾಯಿತು