ಶಿವರಾತ್ರಿ ಸಾಂಸ್ಕೃತಿಕ ಜಾಗರಣೆ
ದೊಡ್ಡಬಳ್ಳಾಪುರ: ಇಲ್ಲಿನ ಇತಿಹಾಸ ಪ್ರಸಿದ್ಧ ಚಂದ್ರಮೌಳೀಶ್ವರ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೇತೃತ್ವದಲ್ಲಿ ಮಹಾ ಶಿವರಾತ್ರಿ ಅಂಗವಾಗಿ ವಿಶಿಷ್ಟ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಜಾಗರಣೆ ಕಾರ್ಯಕ್ರಮ ನಡೆಯಿತು. ಹಲವಾರು ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಮುಖ್ಯವಾಗಿ ಪುಟಾಣಿ ಮಕ್ಕಳು ಜಾನಪದ ಮತ್ತು ಶಾಸ್ತ್ರೀಯ ನೃತ್ಯ ಕಾರ್ಯಕ್ರಮ ನಡೆಸಿಕೊಟ್ಟು ಭಕ್ತಜನರ ಗಮನ ಸಳೆದರು. ಬೆಳಗ್ಗಿನಿಂದಲೂ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು. ಸಾವಿರಾರು ಭಕ್ತಾದಿಗಳು ಭೇಟಿ ನೀಡಿ ವಿಶೇಷ ದರ್ಶನ ಮತ್ತು ಪೂಜೆ ಸಲ್ಲಿಸಿದರು. ಸಂಜೆ 4 ಗಂಟೆಯ ನಂತರ ಮಧ್ಯರಾತ್ರಿಯವರೆಗೆ ನಿರಂತರ ಕಲಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.