ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಕಾಳಿಕಾ ದೇವಾಲಯದಲ್ಲಿ ಹೊಸ ವರ್ಷದ ಸಂಭ್ರಮ

Mainashree
Updated On : 2 Jan 2014, 12:22 pm

ದೊಡ್ಡಬಳ್ಳಾಪುರ: ಇಲ್ಲಿನ ಮುಕ್ತಾಂಬಿಕಾ ರಸ್ತೆಯಲ್ಲಿರುವ ಶ್ರೀಕಾಳಿಕಾ ಕಮಟೇಶ್ವರ ದೇವಾಲಯದಲ್ಲಿ 2014ರ ಹೊಸವರ್ಷದ ಅಂಗವಾಗಿ ವಿಶೇಷ ಪೂಜಾಲಂಕಾರಗಳನ್ನು ಏರ್ಪಡಿಸಿ ಸಂಭ್ರಮದಿಂದ ಆಚರಿಸಲಾಯಿತು.
ಬುಧವಾರ ಬೆಳಗ್ಗಿನಿಂದಲೇ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ಬೃಹತ್ ಆನೆಗಳ ಮಾದರಿಗಳಿಂದ ದೇವಾಲಯವನ್ನು ಅದ್ಧೂರಿಯಾಗಿ ಅಲಂಕರಿಸಲಾಗಿತ್ತು. ದೇವಾಲಯದ ಗರ್ಭಗುಡಿಯಲ್ಲಿರುವ ಶ್ರೀಕಾಳಿಕಾ ಮಾತೆಗೆ ವಜ್ರಾಂಗಿ ಅಲಂಕಾರ ಮಾಡಲಾಗಿತ್ತು. ಅದೇ ರೀತಿ ಗಣಪತಿ ಮತ್ತು ಕಮಟೇಶ್ವರ ದೇವರುಗಳಿಗೂ ಸಹ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ದೇವಾಲಯವನ್ನು ವಿದ್ಯುತ್ ದೀಪಗಳಿಂದ ಆಕರ್ಷಕವಾಗಿ ಸಿಂಗರಿಸಲಾಗಿತ್ತು.
ಹೊಸವರ್ಷದ ಅಂಗವಾಗಿ ದೇವಾಲಯಕ್ಕೆ ಸಹಸ್ರಾರು ಭಕ್ತಾದಿಗಳು ಭೇಟಿ ನೀಡಿದ್ದರು. ವಿಶೇಷವಾಗಿ ಮಹಿಳೆಯರು ಅತ್ಯಧಿಕ ಸಂಖ್ಯೆಯಲ್ಲಿ ದೇಗುಲಕ್ಕೆ ಭೇಟಿ ನೀಡಿ ಭಕ್ತಿಭಾವ ಮೆರೆದರು. ದೇವಾಲಯದ ಉತ್ಸವ ಮೂರ್ತಿಯನ್ನು ಆವರಣದಲ್ಲಿ ಪ್ರತಿಷ್ಠಾಪಿಸಲಾಗಿತ್ತು. ಷಣ್ಮುಖಸ್ವಾಮಿಗೂ ಪೂಜಾಲಂಕಾರಗಳು ನಡೆದವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement