ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ನೂತನ ವರ್ಷ; ವಿವಿಧೆಡೆ ವಿಶೇಷ ಪೂಜೆ

Mainashree
Updated On : 2 Jan 2014, 12:22 pm

ಮಾಲೂರು: ನೂತನ ವರ್ಷರಾಂಭದ ಮೊದಲದಿನವನ್ನು ಪಟ್ಟಣದಲ್ಲಿ ಜನತೆ ಸಡಗರದಿಂದ ಬರಮಾಡಿಕೊಂಡರು.
ಪಟ್ಟಣದ ಗ್ರಾಮ ದೇವತೆ ಮಾರಿಕಾಂಬ, ಶಂಕರನಾರಾಯಣಸ್ವಾಮಿ, ಆಂಜನೇಯ ಸ್ವಾಮಿ, ಸುಬ್ರಮಣ್ಯಸ್ವಾಮಿ, ಧರ್ಮರಾಯ ದೇವಾಲಯದಲ್ಲಿ ನೂತನ ವರ್ಷದ ಪ್ರಯುಕ್ತ ವಿಶೇಷ ಅಲಂಕಾರ ಮಾಡಲಾಗಿತ್ತು. ಬೆಳಗ್ಗಿನಿಂದಲೇ ಪಟ್ಟಣದ ಹೃದಯ ಭಾಗದಲ್ಲಿರುವ ಮಾರಿಕಾಂಬ ದೇವಾಲಯದಲ್ಲಿ ಸರತಿ ಸಾಲಿನಲ್ಲಿ ನಿಂತು ಭಕ್ತರು ದೇವರ ದರ್ಶನ ಪಡೆದರು. ದೇವಾಲಯವನ್ನು ಸಂಪೂರ್ಣವಾಗಿ ಹೂವಿನಲ್ಲಿ ಅಲಂಕಾರ ಮಾಡಲಾಗಿತ್ತು. ನೂತನ ವರ್ಷದ ಅಂಗವಾಗಿ ಹತ್ತು ಸಾವಿರಕ್ಕೂ ಹೆಚ್ಚು ಸಿಹಿ ಲಾಡುಗಳನ್ನು  ವಿತರಿಸಲಾಯಿತು. ಪೊಲೀಸ್ ಠಾಣೆಯ ಮುಂಭಾಗದ  ಸುಬ್ರಮಣ್ಯಸ್ವಾಮಿ ದೇವಾಲಯದಲ್ಲಿ ಸ್ವಾಮಿಗೆ ಮಾಡಿರುವ ವಿಶೇಷ ಅಲಂಕಾರವನ್ನು ವೀಕ್ಷಿಸಲು ಭಕ್ತಾದಿಗಳು ಸಾಲಿನಲ್ಲಿ ನಿಂತು ದರ್ಶನ ಪಡೆದರು. ಧರ್ಮರಾಯ ದೇವಾಲಯದಲ್ಲೂ ವಿಶೇಷ ಅಲಂಕಾರ ಮಾಡಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement