ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಸುದ್ದಿ ಸಂಕ್ಷೇಪ

Mainashree
Updated On : 2 Jan 2014, 12:25 pm

ಇಂದಿನಿಂದ ಅದಾಲತ್ ಕಾರ್ಯಕ್ರಮ
ರಾಮನಗರ: 2013-14ನೇ ಸಾಲಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದ ಹಾಗೂ ಜಿಲ್ಲಾ ಹಂತದ ಶಿಕ್ಷಣ ಅದಾಲತ್ ಕಾರ್ಯಕ್ರಮವು ಜ.2ರಿಂದ ಚಾಲನೆಗೊಳ್ಳಲಿದ್ದು, ಆಯಾ ತಾಲೂಕಿನ ಬಿಇಒ ಕಚೇರಿಯಲ್ಲಿ ಕಾರ್ಯಕ್ರಮ ಜರುಗಲಿದೆ. ಶಿಕ್ಷಕರು ಹಾಗೂ ಸಾರ್ವಜನಿಕರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಪ್ರಹ್ಲಾದಗೌಡ ಕೋರಿದ್ದಾರೆ. ಚನ್ನಪಟ್ಟಣದಲ್ಲಿ ಜ.2 ಮತ್ತು 3ರಂದು, ಕನಕಪುರದಲ್ಲಿ ಜ.4 ಮತ್ತು 6ರಂದು, ಮಾಗಡಿಯಲ್ಲಿ ಜ.7 ಮತ್ತು 8ರಂದು, ರಾಮನಗರದಲ್ಲಿ ಜ.9 ಮತ್ತು 10ರಂದು ಹಾಗೂ ಜಿಲ್ಲಾ ಹಂತದ ಶಿಕ್ಷಣ ಅದಾಲತ್ ಕಾರ್ಯಕ್ರಮವು ಜ.16ರಂದು ನಡೆಯಲಿವೆ.
ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ ಬಗ್ಗೆ ವಿಚಾರ ಸಂಕಿರಣ
ರಾಮನಗರ: ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವೈದ್ಯಕೀಯ ಸಂಘ ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ಜ.2ರಂದು ನಗರದ ಜಿಲ್ಲಾ ಆರೋಗ್ಯ ಇಲಾಖೆಯ ಅರ್ಕಾವತಿ ಭವನದಲ್ಲಿ ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ ಬಗ್ಗೆ ವಿಚಾರ ಸಂಕಿರಣ ನಡೆಯಲಿದೆ.  ವಿಚಾರ ಸಂಕಿರಣವನ್ನು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಎಸ್.ಎಚ್. ಹೊಸಗೌಡರ್  ಉದ್ಘಾಟಿಸುವರು. ಜಿಲ್ಲಾಧಿಕಾರಿ ಡಾ.ಡಿ.ಎಸ್. ವಿಶ್ವನಾಥ್ ಅಧ್ಯಕ್ಷತೆ ವಹಿಸುವರು. ಜಿ.ಪಂ. ಸಿಇಒ ಡಾ.ಎಂ.ವಿ.ವೆಂಕಟೇಶ್, ಪೊಲೀಸ್ ಅಧೀಕ್ಷಕ ಅನುಪಮ್ ಅಗ್ರವಾಲ್, ಆರೋಗ್ಯ ಇಲಾಖೆಯ ಉಪ ನಿರ್ದೇಶಕ ಡಾ.ರಹತ್ ಇ ಜಾನ್ಷೇ ಶೇಖ್ ಪಾಲ್ಗೊಳ್ಳುವರು. ಸ್ತ್ರೀರೋಗ ತಜ್ಞೆ ಡಾ.ಪದ್ಮ, ವಕೀಲೆ ರಾಜೇಶ್ವರಿ ಹಾಗು ಜನಾರ್ದನ್ ಉಪನ್ಯಾಸ ನೀಡುವರು.
ದೇವಾಲಯಗಳಲ್ಲಿ ವಿಶೇಷ ಪೂಜೆ
ಮಾಗಡಿ: ನೂತನ ವರ್ಷಾರಂಭ 2014 ರ ಪ್ರಯುಕ್ತ ಇತಿಹಾಸ ಪ್ರಸಿದ್ಧ ತಿರುಮಲೆ ಶ್ರೀರಂಗನಾಥಸ್ವಾಮಿ ದೇವಾಲಯ ಸೇರಿದಂತೆ ವಿವಿಧ ಪ್ರಸಿದ್ಧ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯ ಅತ್ಯಂತ ವಿಜೃಂಭಣೆಯಿಂದ ಜರುಗಿದವು, ನೂತನ ವರ್ಷಾರಂಭದ ಅಂಗವಾಗಿ  ಭಕ್ತರು ದೇವಾಲಯಗಳಿಗೆ ತೆರಳಿ ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಿದರು. ವಿವಿಧ ಕನ್ನಡಪರ ಸಂಘಟನೆಗಳು, ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಕೇಕ್  ಕತ್ತರಿಸಿ ನೂತನ ವರ್ಷದ ಸಂಭ್ರಮವನ್ನು ಆಚರಿಸಿಕೊಂಡರು. ಇದೇ ವೇಳೆ ಶುಭಾಶಯ ವಿನಿಮಯ ಮಾಡಿಕೊಂಡು  ಸಂಭ್ರಮಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement