ದೊಡ್ಡಬಳ್ಳಾಪುರ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ
ದೊಡ್ಡಬಳ್ಳಾಪುರ: ಇಲ್ಲಿನ ಡಿಕ್ರಾಸ್ ರಸ್ತೆಯಲ್ಲಿರುವ ಶ್ರೀಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಹೊಸವರ್ಷದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ ಮತ್ತು ಭಕ್ತಾದಿಗಳಿಂದ ಭಜನೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದರು.
ಇದೇ ಸಂದರ್ಭದಲ್ಲಿ ದೇವಾಲಯದಲ್ಲಿರುವ ಅಯ್ಯಪ್ಪಸ್ವಾಮಿ ಮೂಲ ವಿಗ್ರಹಕ್ಕೆ ವಜ್ರಾಂಗಿ ಅಲಂಕಾರ, ಕಮಲ ಪುಷ್ಪಾಲಂಕಾರ ಮಾಡಲಾಗಿತ್ತು.