ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಮಂಚನಬೆಲೆ ಜಲಾಶಯ ಸುತ್ತಮುತ್ತ ಅಕ್ರಮ ಮರಳು, ಗಣಿಗಾರಿಕೆ: ಶಾಸಕ

Mainashree
Updated On : 2 Jan 2014, 11:11 am

ಮಾಗಡಿ: ಮಂಚನಬೆಲೆ ಜಲಾಶಯದ ಸುತ್ತಮುತ್ತ ಅಕ್ರಮ ಮರಳು, ಕಲ್ಲಗಣಿಗಾರಿಕೆ ದಂದೆ ಎಗ್ಗಿಲ್ಲದಂತೆ ನಡೆಯುತ್ತಿದ್ದು, ಜಿಲ್ಲೆಗೆ ಅನಾಹುತ ಕಾದಿದೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಆತಂಕ ವ್ಯಕ್ತಪಡಿಸಿದರು.
ಅವರು ತಾಲೂಕಿನ ಮಂಚನಬೆಲೆ, ಆವ್ವೇರಹಳ್ಳಿ ಕಾಲೋನಿಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿ ಮಂಚನಬೆಲೆ ಸುತ್ತಮುತ್ತ ಅಕ್ರಮ ಮರಳುಗಾರಿಕೆ,ಕ ಲ್ಲುಗಣಿಗಾರಿಕೆಯಿಂದಾಗಿ ಅಂತರ್ಜಲ ಕುಸಿದಿದೆ. ಜಲಾಶಯ ಅನಾಹುತಕ್ಕೂ ಸಮೀಪಿಸಿದೆ. ಜಿಲ್ಲಾಡಳಿತ, ತಾಲೂಕು ಆಡಳಿತ ತ್ವರಿತಗತಿಯಲ್ಲಿ ಕಾರ್ಯಾಚರಣೆ ಹಮ್ಮಿಕೊಳ್ಳದಿದ್ದರೆ. ಜಿಲ್ಲೆಗೆ ಅನಾಹುತ ತಪ್ಪಿದ್ದಲ್ಲ ಎಂದರು.
ಮಂಚನಬೆಲೆ   ಜಲಾಶಯ ಬಳಿ ಸುಂದರವಾದ ಉದ್ಯಾನವನ ನಿರ್ಮಾಣಕ್ಕಾಗಿ 1.50 ಕೋಟಿ ಕಾವೇರಿ ನೀರಾವರಿ ನಿಗಮದಿಂದ ಮಂಜೂರಾಗಿದ್ದು, ಈಗಾಗಲೇ 50 ಲಕ್ಷ ರು. ಬಿಡುಗಡೆಯಾಗಿದೆ. ಸದ್ಯದಲ್ಲೇ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಶಾಸಕರು ತಿಳಿಸಿದರು.
ಬೇಸಿಗೆ ಕಾಲ ಸಮೀಪಿಸುತ್ತಿದ್ದು, ಮಂಚನಬೆಲೆ ಜಲಾಶಯದಲ್ಲಿ ನೀರಿನ ಅಂತರ್ಜಲ ಮಟ್ಟ ದಿನೇ ದಿನೇ ಕುಸಿಯುತ್ತಿದೆ. ಈ ನಿಟ್ಟಿನಲ್ಲಿ  ಮಾಗಡಿ ಪಟ್ಟಣ ನೀರು ಪೂರೈಕೆಗೆ ತೊಂದರೆಯಾಗದಂತೆ ಜಲಾಶಯ ಬಳಿ ಇರುವ ಜಾಕ್‌ವೆಲ್‌ಗಳನ್ನು ದುರಸ್ಥಿಪಡಿಸಿ ನೀರಿನ ಸಮಸ್ಯೆ ಉದ್ಭವವಾಗದಂತೆ ಸಮರೋಪಾಧಿಯಲ್ಲಿ ಅಗತ್ಯ ಕ್ರಮ ವಹಿಸುವಂತೆ  ಪುರಸಭೆ ಮುಖ್ಯಾಧಿಕಾರಿ ಕೆ.ಕೆ.ಮುತ್ತಪ್ಪ ಅವರಿಗೆ ಸೂಚಿಸಿದ್ದಾಗಿ ತಿಳಿಸಿದರು.  ತಾಲೂಕು ಪಂಚಾಯ್ತಿ ಅಧ್ಯಕ್ಷ ಜಿ.ಕೃಷ್ಣ, ಉಪಾಧ್ಯಕ್ಷೆ ಭಾರತಿ ಮಹದೇವಯ್ಯ, ಜಿ.ಪಂ. ಸದಸ್ಯ ವಿಜಯಕುಮಾರ್, ಗ್ರಾ.ಪಂ. ಅಧ್ಯಕ್ಷ ಲೋಕೇಶ್, ಮಂಚನಬೆಲೆ ಲೋಕೇಶ್, ನರಸಿಂಹಯ್ಯ, ತಹಸೀಲ್ದಾರ್ ಶಿವಕುಮಾರ್, ಜಿ.ಪಂ.ಎಇಇ ರವಿ ಎಸ್. ಸೂರನ್, ಬೆಸ್ಕಂ ಎಇಇ ಪ್ರಭಾಕರ್, ಪುರಸಭಾ ಮುಖ್ಯಾಧಿಕಾರಿ ಕೆ.ಕೆ.ಮುತ್ತಪ್ಪ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement