ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ತೂಬಗೆರೆ ಹೋಬಳಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

Vishwanath S
Updated On : 13 Jan 2014, 1:17 am

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿಯ ಗಂಟಿಗಾನಹಳ್ಳಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ದೇವನಹಳ್ಳಿ ಶಾಸಕ ಪಿಳ್ಳಮುನಿಶಾಮಪ್ಪ ಭಾನುವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಭಿವೃದ್ಧಿಯಲ್ಲಿ ಹೈದರಾಬಾದ್-ಕರ್ನಾಟಕದಷ್ಟೇ ಹಿಂದುಳಿದ ಪ್ರದೇಶ ಈ ಹೋಬಳಿಯಾಗಿದ್ದು, ಇದರ ಸರ್ವಾಂಗೀಣ ಪ್ರಗತಿಗೆ ಹಲವು ಯೋಜನೆಗಳು ವ್ಯವಸ್ಥಿತವಾಗಿ ಜಾರಿಯಾಗಬೇಕಿದೆ. ಸರ್ಕಾರದ ಯೋಜನೆಗಳು ಈ ಜನರನ್ನು ವ್ಯವಸ್ಥಿತವಾಗಿ ತಲುಪದಿರುವುದೇ ಹಿಂದುಳಿಯಲು ಕಾರಣ. ರಸ್ತೆ, ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಹೋಬಳಿಯನ್ನು ಕಡೆಗಣಿಸಲಾಗಿದೆ. ಈ ಹಂತದಲ್ಲಿ ಮೂಲಹಂತದಿಂದ ಯೋಜನೆಗಳ ಅನುಷ್ಠಾನಕ್ಕೆ ಚಿಂತಿಸಲಾಗುವುದು. ನಿರೀಕ್ಷಿತ ಪ್ರಮಾಣದ ಅಭಿವೃದ್ಧಿ ಸಾಧ್ಯವಾಗದಿರುವುದಕ್ಕೆ ಅನೇಕ ಕಾರಣಗಳಿರಬಹುದು. ಆದರೆ ಕಾರಣಗಳ ತರ್ಕಕ್ಕಿಂತ ಕೆಲಸ ಮಾಡುವ ಉತ್ಸಾಹ ಮುಖ್ಯ ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಎನ್. ಹನುಮಂತೇಗೌಡ, ಜೆಡಿಎಸ್ ಮುಖಂಡರಾದ ಎ.ನರಸಿಂಹಯ್ಯ, ಅಪ್ಪಯ್ಯಣ್ಣ, ಎಂಪಿಸಿಎಸ್ ಅಧ್ಯಕ್ಷ ವೆಂಕಟೇಶ್ ಬಾಬು, ಗ್ರಾ.ಪಂ ಸದಸ್ಯ ರಂಗಪ್ಪ ಸೇರಿದಂತೆ ಸ್ಥಳೀಯ ಗ್ರಾಮ ಪಂಚಾಯಿತಿ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.
ಗಂಟಿಗಾನಹಳ್ಳಿಯಲ್ಲಿ ರಸ್ತೆ ಕಾಮಗಾರಿ, ಡಾಂಬರೀಕರಣ, ಹಾಲು ಉತ್ಪಾದಕರ ಸಂಘದ ಮಳಿಗೆಗಳ ಉದ್ಘಾಟನೆ ಸೇರಿದಂತೆ ಅನೇಕ ಕಾರ್ಯಕ್ರಮಗಳು ನಡೆದವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement