ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

'ಸೌಲಭ್ಯ ಸದುಪಯೋಗದಿಂದ ಶೈಕ್ಷಣಿಕ ಅಭಿವೃದ್ಧಿ'

Vishwanath S
Updated On : 13 Jan 2014, 1:18 am

ಹೊಸಕೋಟೆ: ಸರಕಾರ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಶೈಕ್ಷಣಿಕ ಅಭಿವೃದ್ಧಿ ಹೊಂದಬೇಕು ಎಂದು ಜಿ.ಪಂ.ಅಧ್ಯಕ್ಷ ವಿ. ನಾರಾಯಣಸ್ವಾಮಿ ಹೇಳಿದರು.
ತಾಲೂಕಿನ ದೊಡ್ಡಗಟ್ಟಿಗನಬ್ಬೆ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಿ ಮಾತನಾಡಿ, ಸರಕಾರ ನಾನಾ ಯೋಜನೆಗಳಡಿ ಅಗತ್ಯ ಸವಲತ್ತುಗಳನ್ನು ನೀಡುತ್ತಿದ್ದು, ಜಿ.ಪಂ.ನಿಂದ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಶಿಕ್ಷಕರ ವೇತನ ಹಾಗೂ ಇತರ ಭತ್ಯೆ ಸಕಾಲದಲ್ಲಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಪೋಷಕರು ಶಿಕ್ಷಕರೊಂದಿಗೆ ಸಹಕರಿಸಿ, ಮಕ್ಕಳ ಶೈಕ್ಷಣಿಕ ಪ್ರಗತಿಗೆ ಕಾಳಜಿ ವಹಿಸಬೇಕು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿರುವ ಶಿಕ್ಷಕರ ಪ್ರೋತ್ಸಾಹ ಅತ್ಯವಶ್ಯ. ಸರಕಾರದ ಉನ್ನತ ಹುದ್ದೆಗಳಲ್ಲಿರುವ ಬಹಳಷ್ಟು ಅಧಿಕಾರಿಗಳು ಗ್ರಾಮೀಣ ಪ್ರದೇಶದವರೇ ಆಗಿರುವುದು ಇದಕ್ಕೆ ನಿದರ್ಶನ ಎಂದರು. ಮುಖ್ಯ ಶಿಕ್ಷಕಿ ಲಲಿತಮ್ಮ, ಗ್ರಾ.ಪಂ.ಸದಸ್ಯ ಜಗನ್ನಾಥ್, ಎಸ್‌ಡಿಎಂಸಿ ಸದಸ್ಯ ಭಗವಂತಪ್ಪ, ಚಂದು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement