ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಬೆಂ.ಗ್ರಾ. ಜಿಲ್ಲಾ ಕೇಂದ್ರದ ರಚನೆಗೆ ಶೀಘ್ರ ಚಾಲನೆ

Vishwanath S
Updated On : 20 Jan 2014, 12:41 pm

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರದ ರಚನೆಗೆ ಶೀಘ್ರ ಚಾಲನೆ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.
ಅವರು ಭಾನುವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಕೇಂದ್ರ ವತಿಯಿಂದ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೊ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ಹಲವಾರು ವರ್ಷಗಳ ಸತತ ಪ್ರಯತ್ನದಿಂದಾಗಿ ಇಂದು ಪೊಲಿಯೋ ಮುಕ್ತ ಭಾರತವಾಗಿದೆ. ಆದರೂ   ನಿರಂತರ ಪೊಲಿಯೊ ಲಸಿಕೆ ಕಾರ್ಯಕ್ರಮ ಮಾಡಬೇಕಿದೆ. ಪೋಷಕರು ಮಕ್ಕಳಿಗೆ ಪಲ್ಸ್ ಪೊಲಿಯೋ ಲಸಿಕೆ ಹಾಕಿಸುವ ಮೂಲಕ ಮಕ್ಕಳ ಭವಿಷ್ಯ ಉಜ್ವಲವಾಗುತ್ತದೆ. ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. ತಾಲೂಕಿನಾದ್ಯಂತ 90 ಲಸಿಕಾ ಕೇಂದ್ರಗಳ ಮೂಲಕ 360 ಜನ ಸಿಬ್ಬಂದಿ 22575 ಮಕ್ಕಳಿಗೆ ಲಸಿಕೆ ಹಾಕಿರುವುದಾಗಿ ತಾಲೂಕು ಆರೋಗ್ಯಾಧಿಕಾರಿ ಡಾ.ನರಸಿಂಹಯ್ಯ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement