ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಹೆಣ್ಣುಮಕ್ಕಳ ದಿನಾಚರಣೆ ಸಪ್ತಾಹ

Rashmi Kasaragodu
Updated On : 22 Jan 2014, 1:44 am

ಕನಕಪುರ: ಕರ್ನಾಟಕ ರಾಜ್ಯ ಸಮಗ್ರ ಮಕ್ಕಳ ರಕ್ಷಣಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಕನಕಪುರ ತಾಲೂಕು ಕೋಡಿಹಳ್ಳಿಯ ಶಾರದಾ ಪ್ರೌಢಶಾಲೆ ಆವರಣದಲ್ಲಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಸಪ್ತಾಹ ನಡೆಯಿತು.
 ಉದ್ಘಾಟನೆಯನ್ನು ನೆರವೇರಿಸಿದ ಮುಖ್ಯಶಿಕ್ಷಕ ಮಠಪತಿ ಮಾತನಾಡುತ್ತಾ, ಗಾಂಧೀ ಕನಸಿನ ರಾಮರಾಜ್ಯದಲ್ಲಿ ಮಹಿಳೆಯರು ನಿರ್ಭಯರಾಗಿ ಮಧ್ಯರಾತ್ರಿಯಲ್ಲಿ ಬೇಕಾದರೂ ಸಂಚರಿಸಬಹುದೆನ್ನುವುದು ಇಂದಿನ ಭಾರತದಲ್ಲಿ ಇಂದಿಗೂ ಸಾಧ್ಯವಾಗಿಲ್ಲ, ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಬೇಕಾದರೆ ಸಮಾಜ, ಶಿಕ್ಷಣಗಳು ಪ್ರಮುಖ ಪಾತ್ರ ವಹಿಸಬೇಕಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ಹೋಬಳಿ ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಹತ್ತಕ್ಕೂ ಹೆಚ್ಚು ಪ್ರೌಢಶಾಲೆಗಳ ಮಕ್ಕಳು ಪಾಲ್ಗೊಂಡಿದ್ದರು. ಚರ್ಚಾಸ್ಪರ್ಧೆ, ಪ್ರಬಂಧ ಸ್ಪರ್ಧೆ, ಭಿತ್ತಿಚಿತ್ರಗಳ ರಚನೆ ಸ್ಪರ್ಧೆಗಳು ನಡೆದು ವಿಜೇತರಿಗೆ ನಗದು ಬಹುಮಾನಗಳನ್ನು ವಿತರಿಸಲಾಯಿತು. ಹೋಬಳಿ ಮಟ್ಟದಲ್ಲಿ ವಿಜೇತರಾದ ಸ್ಪರ್ಧಿಗಳನ್ನು ತಾಲೂಕು ಮಟ್ಟದ ಸ್ಪರ್ಧೆಗೆ ಕಳುಹಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಮುಖ್ಯಶಿಕ್ಷಕ ರಂಗೇಗೌಡ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುನೀತಾ, ಸೀಮಾ, ಪ್ರಭಾಕರ, ಹಾಗೂ ಭಾರತಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement