ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಉಪ ನೋಂದಣಾಧಿಕಾರಿ ಕಚೇರಿ ಸ್ಥಳಾಂತರಕ್ಕೆ ವಿರೋಧ

Rashmi Kasaragodu
Updated On : 23 Jan 2014, 2:17 am

ನೆಲಮಂಗಲ: ಮಿನಿ ವಿಧಾನಸೌಧದಲ್ಲಿರುವ ಉಪ ನೋಂದಣಾಧಿಕಾರಿ ಕಚೇರಿಯನ್ನು ಖಾಸಗಿ ಕಟ್ಟಡಕ್ಕೆ ಸ್ಥಳಾಂತರ ಮಾಡದಂತೆ ಸಾರ್ವಜನಿಕರು ಹಾಗೂ ಪತ್ರ ಬರಹಗಾರರು ತಹಸೀಲ್ದಾರ್ ಡಾ.ಗೀತಾ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.
ತಾಲೂಕಿನ ಮಿನಿ ವಿಧಾನಸೌಧವು ಪಟ್ಟಣದ ಹೃದಯ ಭಾಗದ ಬಸ್ ನಿಲ್ದಾಣದ ಸಮೀಪವಿದ್ದು ತಾಲೂಕಿನ ಜನತೆಗೆ ಅನುಕೂಲಕರವಾಗಿದೆ. ಸರ್ಕಾರಿ ಸೇವೆಗಳು ಸಾರ್ವಜನಿಕರಿಗೆ ಒಂದೇ ಸೂರಿನಡಿಯಲ್ಲಿ ದೊರಕಬೇಕು ಎಂಬ ಸರ್ಕಾರದ ಉದ್ದೇಶದಂತೆ ಮಿನಿ ವಿಧಾನಸೌಧದಲ್ಲಿ ಕಂದಾಯ ಇಲಾಖೆ, ಸರ್ವೆ ಇಲಾಖೆ ಕಾರ್ಯ ನಿರ್ವಹಿಸುತ್ತಿದ್ದು ಸಾರ್ವಜನಿಕರಿಗೆ ಅನುಕೂಲಕರವಾಗಿದೆ. ತಾವು ಹಿರಿಯ ಅಧಿಕಾರಿಗಳ ಸೂಚನೆಯಂತೆ ಬೇರೆ ಖಾಸಗಿ ಕಟ್ಟಡಕ್ಕೆ ಸ್ಥಳಾಂತರಿಸುವುದರಿಂದ ಸಾರ್ವಜನಿಕರು ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಜಿಪಂ ಸದಸ್ಯ ಕಾಂತರಾಜು ತಿಳಿಸಿದ್ದಾರೆ.
ಉಪ ನೋಂದಣಾಧಿಕಾರಿ ಕಚೇರಿಯನ್ನು ಬೇರೆಡೆಗೆ ಸ್ಥಳಾಂತರಿಸಲು ಅಧಿಕಾರಿಗಳು ಮುಂದಾದರೆ ತಾಲೂಕಿನ ಜನತೆ ಹಾಗೂ ಸಂಘ ಸಂಸ್ಥೆಗಳ ವತಿಯಿಂದ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಸಿದ್ದಾರೆ. ರೈತರ ಸಂಘದ ಅಧ್ಯಕ್ಷ ನಾಗರಾಜು, ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ಸುಬ್ಬಣ್ಣ, ಪತ್ರ ಬರಹಗಾರರಾದ ಗಂಗರಾಜು, ವಕೀಲ ರಘುನಾಥ್, ಸಿದ್ದರಾಮು, ವಿಶ್ವ, ರವಿ, ರಾಘವೇಂದ್ರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement