ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಜಿಲ್ಲಾ ಹೋರಾಟ ಸಮಿತಿಯ ಧರಣಿ 3ನೇ ದಿನಕ್ಕೆ

Rashmi Kasaragodu
Updated On : 23 Jan 2014, 2:17 am

ಕನ್ನಡಪ್ರಭ ವಾರ್ತೆ   ದೇವನಹಳ್ಳಿ   ಜ.22
ತಾಲೂಕು ಜಿಲ್ಲಾ ಹೋರಾಟ ಸಮಿತಿಯವರು ಇಲ್ಲಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು ಮೂರನೆಯ ದಿನವಾದ ಬುಧವಾರ ಪ್ರಮುಖವಾಗಿ ದೇವನಹಳ್ಳಿ ತಾಲೂಕು ಪ್ರಾಂತ ರೈತ ಸಂಘದ ಕಾರ್ಯಕರ್ತರು ಧರಣಿಯಲ್ಲಿ ಭಾಗವಹಿಸಿದ್ದರು.
ಪ್ರಾಂತ ರೈತ ಸಂಘದ ಗೌರವಾಧ್ಯಕ್ಷ ವಿ.ನಾರಾಯಣಸ್ವಾಮಿ ಮಾತನಾಡಿ, ಇಲ್ಲಿನ ವಿಮಾನ ನಿಲ್ದಾಣಕ್ಕೆ ಜಮೀನು ಕೊಟ್ಟಿರುವವರು ನಾವುಗಳು. ನಮ್ಮ ರೈತರ ಜಮೀನುಗಳಿಗೆ ಸಂಬಂಧಪಟ್ಟ ಯಾವುದೇ ಕೆಲಸಗಳಿಗಾಗಿ ಬೆಂಗಳೂರಿಗೆ ಅಲೆಯುವುದು ಬೇಕಾಗಿಲ್ಲ. ಆದ್ದರಿಂದ ಜಿಲ್ಲಾ ಮಟ್ಟದ ಎಲ್ಲ ಇಲಾಖೆ ಕಚೇರಿಗಳೊಂದಿಗೆ ಜಿಲ್ಲಾ ಧಿಕಾರಿಗಳ ಮತ್ತು ಉಪ ವಿಭಾಗಾಧಿಕಾರಿಗಳ ಕಚೇರಿಗಳು ಶೀಘ್ರವಾಗಿ ದೇವನಹಳ್ಳಿಗೆ ವರ್ಗಾವಣೆಯಾಗಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು.
ಇದೇ ಸಂಧರ್ಭದಲ್ಲಿ ಹೋರಾಟ ಸಮಿತಿ ಅಧ್ಯಕ್ಷ ಬಿ.ಕೆ.ಳಿವಪ್ಪ ಮಾತನಾಡಿ, ದೊಡ್ಡಬಳ್ಳಾಪುರ ಶಾಸಕರು ಹಾಗೂ ಅವರ ಬೆಂಬಲಿಗರು ರಾಷ್ಟ್ರೀಯ ಹಬ್ಬ ಗಣರಾಜ್ಯೋತ್ಸವವನ್ನು ಧಿಕ್ಕರಿಸುವುದು ಸಂವಿಧಾನಕ್ಕೆ ಬಗೆಯುವ ದ್ರೋಹವಾಗುತ್ತದೆ. ಅದೇ ತಾಲೂಕಿನಲ್ಲಿರುವ ತೂಬಗೆರೆ ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಸೇರಿರುವುದರಿಂದ ಆ ಹೋಬಳಿ ಅಭಿವೃದ್ಧಿಗೆ ನಮ್ಮ ಶಾಸಕ ಪಿಳ್ಳಮುನಿಶಾಮಪ್ಪ ಆದ್ಯತೆ ನೀಡಿದ್ದಾರೆ ಎಂದರು. ತಾಲೂಕು ಬಿಜೆಪಿ ಅಧ್ಯಕ್ಷ ರಾಜಗೋಪಾಲ್ ಮಾತನಾಡಿದರು. ಸಭೆಯಲ್ಲಿ ಪ್ರಾಂತ ರೈತ ಸಂಘದ ಅಧ್ಯಕ್ಷ ಎನ್.ವೀರಣ್ಣ, ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಎ.ಸಿ.ಗುರುಸ್ವಾಮಿ, ರಾಜ್ಯ ಪರಿಷತ್ ಸದಸ್ಯ ದೇ.ಸೂ.ನಾಗರಾಜ್, ತಾಲೂಕು ಕೃಷಿಕ ಸಮಾಜ ಅಧ್ಯಕ್ಷ ಶ್ರೀನಿವಾಸಗೌಡ, ತಾಲೂಕು ಸೊಸೈಟಿ ಮಾಜಿ ಅಧ್ಯಕ್ಷ ಬಿ.ಶ್ರೀನಿವಾಸ್, ಕರವೇ ಅಧ್ಯಕ್ಷ ಸುರೇಶ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ವೀರಭದ್ರಯ್ಯ, ಇ.ಸಿ.ಚನ್ನಬಸವರಾಜು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement