ಭೀಮರಾವ್
ಮಾಗಡಿ: ಪಟ್ಟಣ ವಾಸಿ ಹಿರಿಯ ವಕೀಲ ಭೀಮರಾವ್(56) ಹೃದಯಾಘಾತದಿಂದ ನಿಧನರಾದರು. ಮೃತರಿಗೆ ಪತ್ನಿ,ಪುತ್ರನಿದ್ದಾನೆ. ಮೃತರು ವಕೀಲ ವೃತ್ತಿಯ ಜೊತೆಗೆ ನೋಟರಿ ಸಹ ಮಾಡುತ್ತಿದ್ದರು.
ಸಂತಾಪ: ಶಾಸಕ ಎಚ್.ಸಿ.ಬಾಲಕೃಷ್ಣ, ಮಾಜಿ ಸಚಿವ ಎಚ್.ಎಂ.ರೇವಣ್ಣ, ತಾಲೂಕು ವಕೀಲರ ಸಂಘದ ಅಧ್ಯಕ್ಷ ಜಿ.ಪಾಪಣ್ಣ ಮತ್ತು ಪದಾಧಿಕಾರಿಗಳು, ವಕೀಲರು, ತಾಲೂಕು ಬ್ರಾಹ್ಮಣ ಸಭಾ ಅಧ್ಯಕ್ಷ ಟಿ.ಕೆ.ಹಿರಿಯಣ್ಣ, ವಿಪ್ರ ಯಾತ್ರಾ ಸಮಿತಿ ಅಧ್ಯಕ್ಷ ಪ್ರಸಾದ್ರಾವ್, ಕಾರ್ಯದರ್ಶಿ ಕೆ.ಆರ್. ನಾಗರಾಜು, ಮಹಿಳಾಧ್ಯಕ್ಷೆ ನಾಗರತ್ನ ಇತರರು ಸಂತಾಪ ಸೂಚಿಸಿದ್ದಾರೆ.
ನಾರಾಯಣಸ್ವಾಮಿ
ದೇವನಹಳ್ಳಿ: ತಾಲೂಕು ವಕೀಲರ ಸಂಘದ ಅಧ್ಯಕ್ಷ ಎನ್.ಶ್ರೀನಿವಾಸಮೂರ್ತಿ ಇವರ ತಂದೆ ಎಸ್.ತೆಲ್ಲೋಹಳ್ಳಿ ಗ್ರಾಮದ ಟಿ.ಎಂ.ನಾರಾಯಣಸ್ವಾಮಿ(66) ಮಂಗಳವಾರ ಬೆಳಗ್ಗೆ ಅಸ್ವಸ್ಥಗೊಂಡಿದ್ದು ಬೆಂಗಳೂರಿನ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ನಿಧನ ಹೊಂದಿದ್ದಾರೆ. ಮೃತರಿಗೆ ಪತ್ನಿ ಅಶ್ವತ್ಥಮ್ಮ ಹಾಗೂ ಇಬ್ಬರು ಪುತ್ರರು ಇದ್ದಾರೆ. ಮಾಜಿ ಸಂಸದ ಸಿ.ನಾರಾಯಣಸ್ವಾಮಿ, ಶಾಸಕ ಪಿಳ್ಳಮುನಿಶಾಮಪ್ಪ, ಮಾಜಿ ಶಾಸಕ ಜಿ.ಚಂದ್ರಣ್ಣ, ಜೆಡಿಎಸ್ ತಾಲೂಕು ಅಧ್ಯಕ್ಷ ಮುನಿಶಾಮಯ್ಯ, ವಕೀಲರ ಸಂಘದ ಸದಸ್ಯರು, ತಾಲೂಕಿನ ಪ್ರಮುಖರು ಅಂತಿಮ ದರ್ಶನ ಪಡೆದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.