ಇಂದು ಶಿವಯೋಗಿ ಸಿದ್ಧರಾಮೇಶ್ವರ ಜಯಂತ್ಯುತ್ಸವ
ರಾಮನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜ.24ರ ಬೆಳಗ್ಗೆ 11ಕ್ಕೆ ಡಾ. ಅಂಬೇಡ್ಕರ್ ಭವನದಲ್ಲಿ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತ್ಯುತ್ಸವ ಸಮಾರಂಭ ನಡೆಯಲಿದೆ.
ಕಾರ್ಯಕ್ರಮವನ್ನು ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸುವರು. ವಿರೋಧ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆ ವಹಿಸುವರು. ಸಂಸದ ಡಿ.ಕೆ. ಸುರೇಶ್, ಶಾಸಕರಾದ ಸಿ.ಪಿ. ಯೋಗೇಶ್ವರ್, ಎಚ್.ಸಿ. ಬಾಲಕೃಷ್ಣ, ಜಿ.ಪಂ. ಅಧ್ಯಕ್ಷ ಎಚ್.ಸಿ. ರಾಜು ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಭಾಗವಹಿಸುವರು.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಕಂದಾಯ ಭವನದಿಂದ ಡಾ.ಅಂಬೇಡ್ಕರ್ ಭವನದವರೆಗೆ ಸಿದ್ದರಾಮೇಶ್ವರ ಅವರ ಭಾವಚಿತ್ರವನ್ನು ವಿವಿಧ ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ಮೆರವಣಿಗೆಯಲ್ಲಿ ತರಲಾಗುವುದು.