ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಕಾಡಾನೆ ಹಿಂಡು ದಾಳಿ; ಬೆಳೆ ನಷ್ಟ

Rashmi Kasaragodu
Updated On : 24 Jan 2014, 2:29 am

ಕನಕಪುರ: ತಾಲೂಕಿನ ಶ್ರೀನಿವಾಸಹಳ್ಳಿ ಗ್ರಾಮದಲ್ಲಿ ಕಾಡಾನೆಗಳ ಹಿಂಡೊಂದು ದಾಳಿ ನಡೆಸಿ ಹತ್ತಾರು ಸಾವಿರ ಬೆಲೆ ಬಾಳುವ ರಾಗಿ ಮೆದೆಯನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ.
ಗ್ರಾಮದ ಶಿವನೇಗೌಡ ಎಂಬವರಿಗೆ ಸೇರಿದ ರಾಗಿ ಮೆದೆಯನ್ನು ಬನ್ನೇರುಘಟ್ಟ ಅಭಯಾರಣ್ಯ ಪ್ರದೇಶದಿಂದ ಆಗಮಿದ್ದ ಆನೆಗಳ ಹಿಂಡು ನಾಶ ಮಾಡಿದೆ. ಕಷ್ಟಪಟ್ಟು ಬೆಳೆದ ಫಸಲು ಕಣ್ಮುಂದೆಯೇ ನಾಶವಾಗುತ್ತಿರುವುದನ್ನು ಕಂಡ ಗ್ರಾಮಸ್ಥರು ಒಗ್ಗೂಡಿ ಆನೆಗಳ ಹಿಂಡನ್ನು ಓಡಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.  ಅರಣ್ಯ ಇಲಾಖೆ ಕಾಡಾನೆಗಳ ನಿಯಂತ್ರಣಕ್ಕೆ ಯಾವುದೇ ಕ್ರಮ ಕೈಗೊಳ್ಳದಿರುವ ಬಗ್ಗೆ ಹಾಗೂ ನಷ್ಟ ಹೊಂದಿದ ರೈತರಿಗೆ ಸಮರ್ಪಕ ಪರಿಹಾರ ವಿತರಿಸದ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement