ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಖಾತ್ರಿ ಸಮರ್ಪಕ ಅನುಷ್ಠಾನಕ್ಕೆ ಸೂಚನೆ: ಶಾಸಕ

Rashmi Kasaragodu
Updated On : 24 Jan 2014, 2:28 am

ದೇವನಹಳ್ಳಿ: ಉದ್ಯೋಗ ಖಾತ್ರಿ ಯೋಜನೆ ಅನ್ವಯ ಎಲ್ಲ 21 ಗ್ರಾಪಂಗಳಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು ಎಂದು ಶಾಸಕ ಪಿಳ್ಳಮುನಿಶಾಮಪ್ಪ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಪಂ ಹಾಗೂ ದೇವನಹಳ್ಳಿ ತಾಪಂ ಸಂಯುಕ್ತಾಶ್ರಯದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ವೈಯುಕ್ತಿಕ ಕಾಮಗಾರಿಗಳ ಅಭಿಯಾನ ದಿನಾಚರಣೆ ಇಲ್ಲಿನ ತಾಪಂ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಜಲಾನಯನ ಇಲಾಖೆ, ಪಶುಪಾಲನಾ ಇಲಾಖೆ, ಕೃಷಿ ಇಲಾಖೆ ಅಧಿಕಾರಿಗಳು ಅಲ್ಲದೆ ತಾಲೂಕಿನ 21 ಗ್ರಾಪಂಗಳ ಅಧ್ಯಕ್ಷರು, ಸದಸ್ಯರು ಹಾಗೂ ಪಿಡಿಒಗಳು ಭಾಗವಹಿಸಿದ್ದರು. ಯಾವುದೇ ಯೋಜನೆ ಸಮರ್ಪಕವಾಗಿ ಯಶಸ್ವಿಯಾಗಬೇಕಾದರೆ ಗ್ರಾಪಂ ಪಿಡಿಒಗಳು, ಕಾರ್ಯದರ್ಶಿಗಳು ಅಲ್ಲದೆ ಈ ಯೋಜನೆಯಲ್ಲಿ ಬರಲಿರುವ ವಿವಿಧ ಇಲಾಖೆಗಳ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿ ಅಗತ್ಯ ಫಲಾನುಭವಿಗಳನ್ನು ಅವರ ಉದ್ದೇಶಕ್ಕೆ ತಕ್ಕಂತೆ ಉದ್ಯೋಗ ಕಲ್ಪಿಸಬೇಕು. ಈ ಯೋಜನೆ ಅನುಷ್ಠಾನಗೊಂಡ ಸಂದರ್ಭದಲ್ಲಿ ಪ್ರತಿ ಗ್ರಾಪಂಗೆ ಭೇಟಿ ನೀಡುವುದಾಗಿ ತಿಳಿಸಿ ಈ ಯೋಜನೆ ಮೂಲಕವಾದರೂ ಹಳ್ಳಿಗಳ ಅಭಿವೃದ್ಧಿಯಾಗಬೇಕು ಎಂದರು. ತಾಪಂ ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ಪ ಲೋಹಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಖಾತ್ರಿ ಸಾಮಾನ್ಯ ಜನರ ಬದುಕಿನ ಹಕ್ಕನ್ನು ಬದಲಾಯಿಸುವ ಯೋಜನೆಯಾಗಿದ್ದು, ಕೇಂದ್ರ 1961ರಿಂದಲೂ ವಿವಿಧ ಯೋಜನೆಗಳನ್ನು ರೂಪಿಸಿ ಬಡವರಿಗಾಗಿ ಉದ್ಯೋಗ ಖಾತ್ರಿ ನೀಡುತ್ತಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement