ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಜನರಲ್ ತಿಮ್ಮಯ್ಯ ಅಕಾಡೆಮಿಯಿಂದ ವಿವಿಧ ಸಾಹಸ ಕ್ರೀಡೆಗಳ ತರಬೇತಿ

Rashmi Kasaragodu
Updated On : 26 Jan 2014, 2:33 am

ರಾಮನಗರ: ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯಿಂದ ರಾಮನಗರ ಜಿಲ್ಲೆಯ ವಿವಿಧೆಡೆ ಜಲ, ನೆಲ, ವಾಯು ಸಾಹಸ ಕ್ರೀಡೆಗಳ ತರಬೇತಿ ಶಿಬಿರಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ.  
ಈ ಮಾಸಾಂತ್ಯದಿಂದ ಮಾರ್ಚ್ವರೆಗೆ ಈ ತರಬೇತಿ ಕಾರ್ಯಕ್ರಮ ಮುಂದುವರೆಯಲಿದೆ. ಸಾಹಸ ಕ್ರೀಡೆಗಳಲ್ಲಿ ಆಸಕ್ತಿಯುಳ್ಳ ರಾಮನಗರ ಜಿಲ್ಲೆಯ ಯುವಕ, ಯುವತಿಯರು ಈ ತರಬೇತಿಯ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ.
ತರಬೇತಿ ಹೊಂದಲು ಆಸಕ್ತಿ ಇರುವವರು ರಾಮನಗರ ಜಿಲ್ಲಾ ಕ್ರೀಡಾಂಗಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಇಲಾಖೆ ಸಹಾಯಕ ನಿರ್ದೇಶಕಿ ಡಿ. ನವಜ್ಯೋತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  




Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement