ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಬೆಂಗಳೂರು ಹಾಲು ಒಕ್ಕೂಟದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ

Rashmi Kasaragodu
Updated On : 26 Jan 2014, 2:32 am

ರಾಮನಗರ: ಬೆಂಗಳೂರು ಹಾಲು ಒಕ್ಕೂಟ (ಬಮೂಲ್) ಸಂಸ್ಥೆಯಿಂದ ಗ್ರಾಮೀಣ ಭಾಗದಲ್ಲಿರುವ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರ ಪ್ರತಿಭಾವಂತ ಮಕ್ಕಳಿಗಾಗಿ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಎಸ್ಎಸ್ಎಲ್ಸಿ, ಪಿಯುಸಿ ಹಾಗೂ ಪದವಿ ಪರೀಕ್ಷೆಗಳಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರುವ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಸದಸ್ಯರಾಗಿರುವವರ ಮಕ್ಕಳು ಮಾತ್ರವೇ ಪುರಸ್ಕಾರಕ್ಕೆ ಅರ್ಹರಾಗಿದ್ದಾರೆ.  
ಅರ್ಹರು ಸಂಬಂಧಿಸಿದ ಹಾಲು ಉತ್ಪಾದಕರ ಕಾರ್ಯದರ್ಶಿಗಳ ಮೂಲಕ ಬಮೂಲ್ ಶಿಬಿರ ಕಚೇರಿಗೆ ಅರ್ಜಿ ಹಾಗೂ ಸಂಬಂಧಿಸಿದ ದಾಖಲಾತಿಗಳ ಪ್ರತಿಗಳನ್ನು ಕಳುಹಿಸಿಕೊಡಬೇಕೆಂದು ಬಮೂಲ್ ರಾಮನಗರ ಶಾಖೆ ವ್ಯವಸ್ಥಾಪಕ ಡಾ.ಶಿವಶಂಕರ್ ಪ್ರಕಟಣೆಯಲ್ಲಿ ಕೋರಿರುತ್ತಾರೆ.


ರಾಷ್ಟ್ರೀಯ ಅಂಗೀಕೃತ ಕ್ರೀಡಾ ಸ್ಪರ್ಧೆ
ಪದಕ ವಿಜೇತರಿಂದ ಅರ್ಜಿ ಆಹ್ವಾನ



ರಾಮನಗರ: ರಾಷ್ಟ್ರೀಯ ಮಟ್ಟದಲ್ಲಿ ಜರುಗಿದ ಅಂಗೀಕೃತ ಕ್ರೀಡಾ ಸ್ಪರ್ಧೆಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಪದಕ ವಿಜೇತರಾಗಿರುವ ಕ್ರೀಡಾಪಟುಗಳಿಗೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನಗದು ಬಹುಮಾನ ನೀಡಲು ಅರ್ಜಿ ಆಹ್ವಾನಿಸಿದೆ.ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನದ ಪದಕ ವಿಜೇತರಾಗಿರುವವರಿಗೆ ರು.1 ಲಕ್ಷ, ಬೆಳ್ಳಿ ಪದಕ ವಿಜೇತರಿಗೆ ರು.50 ಸಾವಿರ ಹಾಗೂ ಕಂಚಿನ ಪದಕ ವಿಜೇತರಿಗೆ ರು.25 ಸಾವಿರ ನಗದು ಬಹುಮಾನವನ್ನು ಪ್ರತಿ ವರ್ಷದಂತೆ ಈ ಬಾರಿಯೂ ವಿತರಿಸಲಾಗುತ್ತಿದೆ. 2013ನೇ ವರ್ಷದಲ್ಲಿ ರಾಮನಗರ ಜಿಲ್ಲೆಯ ಕ್ರೀಡಾಪಟುಗಳು ಕರ್ನಾಟಕವನ್ನು ಪ್ರತಿನಿಧಿಸಿ ಪದಕ ಪಡೆದಿದ್ದಲ್ಲಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ರಾಮನಗರ. ಇವರನ್ನು ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement