ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗಣರಾಜ್ಯೋತ್ಸವ

Rashmi Kasaragodu
Updated On : 26 Jan 2014, 2:32 am

ರಾಮನಗರ: ಜಿಲ್ಲಾಡಳಿತ ಕಚೇರಿ ಇರುವ ಕಂದಾಯ ಭವನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಜ.26ರ ಬೆಳಗ್ಗೆ 7.30ಕ್ಕೆ ನಡೆಯಲಿದ್ದು, ಜಿಲ್ಲಾಧಿಕಾರಿ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಡಾ.ಡಿ.ಎಸ್.ವಿಶ್ವನಾಥ್ ಧ್ವಜಾರೋಹಣ ನೆರವೇರಿಸುವರು. ಕಂದಾಯ ಭವನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.  ಅಂತೆಯೇ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 9ಕ್ಕೆ ನಡೆಯುವ ಗಣ ರಾಜ್ಯೋತ್ಸವ ಕಾರ್ಯಕ್ರಮದಲ್ಲೂ ಎಲ್ಲ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಹಾಜರಿರಬೇಕು. ಗೈರಾದವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.  

ಯುವ ಸಬಲೀಕರಣ ಇಲಾಖೆಯಿಂದ
ಕ್ರೀಡಾಳುಗಳಿಗೆ ಶುಲ್ಕ ಮರು ಪಾವತಿ  


ರಾಮನಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2013-14ನೇ ಸಾಲಿನಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ವಿಜೇತರಾದ ಕರ್ನಾಟಕದ ಕ್ರೀಡಾಪಟುಗಳಿಗೆ ಶೈಕ್ಷಣಿಕ ಶುಲ್ಕ ಮರು ಪಾವತಿ ಯೋಜನೆ ಜಾರಿಗೆ ತಂದಿದೆ.  ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಯೋಜನೆ ಜಾರಿಗೊಳಿಸಲಾಗಿದೆ. ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ವಿಜೇತರಾದ ರಾಮನಗರ ಜಿಲ್ಲೆಯಲ್ಲಿನ ಕ್ರೀಡಾಪಟುಗಳು ಈ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ.
ಅರ್ಹ ಕ್ರೀಡಾಪಟು ಗಳುಸಹಾಯಕ ನಿರ್ದೇಶಕರು, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ರೈಲ್ವೆ ಸ್ಟೇಷನ್ ರಸ್ತೆ, ರಾಮನಗರ. ಜ.31 ರೊಳಗೆ ಸದರಿ ಕಚೇರಿಗೆ ಸಲ್ಲಿಸಬೇಕು. ಮಾಹಿತಿಗೆ ದೂ. 080-27274655.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement