ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಯುವ ಸಮೂಹದಲ್ಲಿ ರಾಷ್ಚ್ರಾಭಿಮಾನ ಕುಂಠಿತ : ಕಳವಳ

Rashmi Kasaragodu
Updated On : 27 Jan 2014, 1:48 am

ಸೂಲಿಬೆಲೆ: ಬೆಳೆಯುತ್ತಿರುವ ತಂತ್ರಜ್ಞಾನದ ನಡುವೆ ಯುವಕರಲ್ಲಿ ಪ್ರಾಮಾಣಿಕತೆ ಹಾಗಬೂ ರಾಷ್ಟ್ರದ ಬಗ್ಗೆ ಅಭಿಮಾನ ಕುಂಠಿತವಾಗುತ್ತಿರುವುದು ಕಳವಳಕಾರಿಯಾಗಿದೆ. ದೇಶಕ್ಕಾಗಿ ಮಡಿದ ನಾಯಕರ ಸ್ಮರಣಿ ಒಂದು ದಿನಕ್ಕೆ ಸಮೀತವಾಗಬಾರದು ಎಂದು ಗ್ರಾಪಂ ಮಾಜಿ ಅಧ್ಯಕ್ಷ ಆರ್. ಮುನಿರಾಜ್ ಕಳವಳ ವ್ಯಕ್ತಪಡಿಸಿದ್ದಾರೆ.
ಸೂಲಿಬೆಲೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ನಡೆದ ಗಣ ರಾಜ್ಯೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ನಿವೃತ್ತ ಮುಖ್ಯ ಶಿಕ್ಷಕ ಮುನಿಶಾಮಯ್ಯ ಪ್ರಾಮಾಣಿಕತೆಯಿಲ್ಲದ ವ್ಯಕ್ತಿಗಳು ದೇಶಕ್ಕೆ ಏನು ಕೊಡುಗೆ ನೀಡಲಾಗದು. ಪ್ರತಿ ವಿದ್ಯಾರ್ಥಿ ದೇಶದ ಬಗ್ಗೆ ಗೌರವ ಭಾವನೆ ಮೂಡಿಸಿಕೊಳ್ಳಬೇಕು ಎಂದರು.
ಇದಕ್ಕೂ ಮುನ್ನ ವಿದ್ಯಾರ್ಥಿಗಳಿಂದ ಕವಾಯಿತು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶಾಲಾಭಿವೃದ್ಧಿ ಸಮತಿ ಅಧ್ಯಕ್ಷ ಎಸ್.ವೈ. ನಾಗರಾಜ್  ಧ್ವಜಾರೋಹಣ ನಡೆಸಿ ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಸಿಆರ್ಪಿ ಮುತ್ತುರಾಜ್ ಸೇರಿದಂತೆ ಗ್ರಾಪಂ ಸದಸ್ಯರು,ಮುಖ್ಯ ಶಿಕ್ಷಕರು ,ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹಾಜರಿದ್ದರು.
ಜನತಾ ಕಾಲೋನಿಯಲ್ಲಿ: ಪಟ್ಟಣದ ಜನತಾ ಕಾಲೋನಿಯಲ್ಲಿರುವ  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಸಮಾರಂಭವನ್ನ ಸಂಭ್ರಮದಿಂದ ಆಚರಣೆ ಮಾಡಲಾಯಿತು.
ವಿವೇಕಾನಂದ ಶಾಲೆಯಲ್ಲಿ: ಪಟ್ಟಣದ ವಿವೇಕಾನಂದ ಶಾಲೆಯಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭವನ್ನು ಹಿರಿಯ ಗಾಂಧಿವಾದಿ ಸೂ.ರಂ ರಾಮಯ್ಯ  ಧ್ವಜಾರೋಹಣ ನಡೆಸುವ ಮೂಲಕ ಉದ್ಘಾಟಿಸಿದರು. ಮುಖ್ಯ ಶಿಕ್ಷಕ ಎಲ್.ನಾಗರಾಜ್ ಸೇರಿದಂತೆ ವಿವೇಕಾನಂದ ವಿದ್ಯಾಭಿವೃದ್ಧಿ ಸಂಘದ ನಿರ್ದೇಶಕರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement