ಲಯನ್ಸ್ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ
ದೇವನಹಳ್ಳಿ : ಇಲ್ಲಿನ ಲಯನ್ಸ್ ಮತ್ತು ಲಯನೆಸ್ ಸಂಸ್ಥೆ ಹಾಗೂ ಲಯನ್ಸ್ ಸೇವಾ ಪ್ರತಿಷ್ಠಾನ ಸಂಸ್ಥೆಯ ಆವರಣದಲ್ಲಿ ಗಣರಾಜ್ಯೋತ್ಸವ ಸಮಾರಂಭವನ್ನು ಆಯೋಜಿಸಲಾಗಿತ್ತು.
ಮಾಜಿ ಶಾಸಕ ಜಿ.ಚಂದ್ರಣ್ಣ ರಾಷ್ಟ್ರಧ್ವಜಾರೋಹಣ ನೆರವೇರಿಸಿ ನಮ್ಮ ಭಾರತಕ್ಕೆ ಉತ್ತಮ ಸಂವಿಧಾನ ರೂಪಿಸಿಕೊಟ್ಟ ಡಾ.ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಿದರಲ್ಲದೆ ಇತರ ರಾಷ್ಟ್ರಗಳಿಗಿಂತ ನಮ್ಮ ಸಂವಿಧಾನ ಹೆಚ್ಚು ಪ್ರಭಾವಶಾಲಿಯಾಗಿದೆ ಎಂದರು.
ಸಮಾರಂಭಜದಲ್ಲಿ ಸಂಘದ ಅಧ್ಯಕ್ಷ ಆರ್.ನಾಗರಾಜಯ್ಯ, ಲಯನೆಸ್ ಸಂಸ್ಥೆ ಅಧ್ಯಕ್ಷೆ ಪದ್ಮಾವತಮ್ಮ, ಲಯನ್ಸ್ ಸೇವಾ ಪ್ರತಿಷ್ಠಾನ ಅಧ್ಯಕ್ಷ ಕೆ.ಸಿ.ಲೋಕೇಶ್ ಹಾಗೂ ಮಾಜಿ ಅಧ್ಯಕ್ಷರಾದ ಸಿ. ಭಾಸ್ಕರ್, ಡಾ.ಮುನಿವೆಂಕಟಪ್ಪ, ಕಾರ್ಯದರ್ಶಿ ಕೆ.ಎಸ್. ರಮೇಶ್ಬಾಬು ಉಪಸ್ಥಿತರಿದ್ದರು. ಶಾಲಾ ಮಕ್ಕಳಿಗೆ ಬಿಸ್ಕತ್ ಪ್ಯಾಕೆಟ್ಗಳನ್ನು ಹಂಚಲಾಯಿತು.