ಸನ್ಮಾನ ಸಮಾರಂಭ
ದೇವನಹಳ್ಳಿ: ಇಲ್ಲಿನ ಶ್ರೀ ವೇಣುಗೋಪಾಲಸ್ವಾಮಿ ಒಳಾಂಗಣ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಸಮಾರಂಭ ಹಾಗೂ ಸನ್ಮಾನ ಸಮಾರಂಭವನ್ನು ಸಂಘದ ಆವರಣದಲ್ಲಿ ಭಾನುವಾರ ಆಯೋಜಿಸಲಾಗಿತ್ತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಡಿ.ಎಂ.ವೇಣುಗೋಪಾಲ್ ಧ್ವಜಾರೋಹಣ ಮಾಡಿದರು. ಇದೇ ಸಂಧರ್ಭದಲ್ಲಿ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ.ಎ.ಎನ್.ಶ್ರೀನಿವಾಸ್ ಹಾಗೂ ನಿವೃತ್ತ ಶಿಕ್ಷಕ ಶ್ರೀರಾಮಯ್ಯ ಅವರಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಜಗನ್ನಾಥ್ ಶಾಲು ಹೊದಿಸಿ ಸನ್ಮಾನಿಸಿದರು.
ಸಮಾರಂಭದಲ್ಲಿ ಸಂಘದ ಗೌರವಾಧ್ಯಕ್ಷ ಪಟೇಲ್ ದೊಡ್ಡವೆಂಕಟಪ್ಪ, ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ಆರ್. ರವಿಕುಮಾರ್ ಉಪಸ್ಥಿತರಿದ್ದರು, ಉಪಾಧ್ಯಕ್ಷ ಎನ್.ಶ್ರೀನಿವಾಸಮೂರ್ತಿ ಸ್ವಾಗತ ಕೋರಿದರು.