ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಜಿ ಆಹ್ವಾನ

Mainashree
Updated On : 29 Jan 2014, 12:34 pm

ರಾಮನಗರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ 2013-14ನೇ ಸಾಲಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಂಡಿರುವವರಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ. ವಾರ್ಷಿಕ ಆದಾಯ ರು. 3.50 ಲಕ್ಷಕ್ಕಿಂತ ಕಡಿಮೆ ಇರುವ ಅಭ್ಯರ್ಥಿಗಳು ತರಬೇತಿ ಪಡೆಯಲು ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳನ್ನು ಸಂಪರ್ಕಿಸಬಹುದು.
ನಿರುದ್ಯೋಗಿ ಮಹಿಳೆಯರಿಗೆ ಉಚಿತ ತರಬೇತಿ
ರಾಮನಗರ: ನೆಲಮಂಗಲ ತಾಲೂಕಿನ ಅರಿಶಿನಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯು ಬೆಂಗಳೂರು ಗ್ರಾಮಾಂತರ, ನಗರ, ರಾಮನಗರ ಮತ್ತು ತುಮಕೂರು ಜಿಲ್ಲಾ ವ್ಯಾಪ್ತಿಯ 18 ರಿಂದ 45 ವರ್ಷದೊಳಗಿನ, ಕನ್ನಡ ಓದಲು ಬರೆಯಲು ಬಲ್ಲ ಆಸಕ್ತ ನಿರುದ್ಯೋಗಿ ಮಹಿಳೆಯರಿಗೆ ವಸತಿಯುತ ಉಚಿತ ಎಂಬ್ರಾಯಿಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್‌ನಲ್ಲಿ ಫೆಬ್ರವರಿಯಲ್ಲಿ ತರಬೇತಿ ನೀಡಲಿದೆ.
ಆಸಕ್ತರು ಫೆ.6ರ ಬೆಳಗ್ಗೆ 10ಕ್ಕೆ ನಿರ್ದೇಶಕರು, ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ-ಅಂಚೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ದೂ.080-27728166 ಸಂಪರ್ಕಿಸಬಹುದು.
ವಿದ್ಯಾರ್ಥಿಗಳಿಬ್ಬರು ನಾಪತ್ತೆ
ರಾಮನಗರ: ಚನ್ನಪಟ್ಟಣ ತಾಲೂಕಿನ ಹರೂರು ಗ್ರಾಮದ 16 ವರ್ಷದ ಎಚ್.ಪಿ. ಜಯಂತ್‌ಕುಮಾರ್ ಮತ್ತು 14 ವರ್ಷದ ಪಿ.ಧನುಷ್ ಅವರು ಜ.21ರಿಂದ ಕಾಣೆಯಾಗಿದ್ದಾರೆ. ಚನ್ನಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಓದುತ್ತಿರುವ ಇವರು ಶಾಲೆಗೆ ಹೋದವರು ಮತ್ತೆ ಮನೆಗೆ ವಾಪಸಾಗಿಲ್ಲ.
ಜಯಂತ್‌ಕುಮಾರ್ ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದಾನೆ. ಧನುಷ್‌ಗುಂಡು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ತುಟಿಯ ಕೆಳಭಾಗದಲ್ಲಿ ಗಾಯದ ಗುರುತು ಇದೆ. ಈ ಇಬ್ಬರೂ ಬಾಲಕರು ಕನ್ನಡ ಭಾಷೆ ಮಾತ್ರ ಮಾತನಾಡಬಲ್ಲರು. ಈ ಬಾಲಕರ ಬಗ್ಗೆ ಮಾಹಿತಿ ದೊರೆತಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ಒದಗಿಸುವಂತೆ  ಚನ್ನಪಟ್ಟಣ ಪುರ ಪೊಲೀಸರು ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement