ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸಮಿತಿ ರಚಿಸಲು ಸಭೆ
ನೆಲಮಂಗಲ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿರುವ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ವಿವಿಧ ಸಮಿತಿಗಳನ್ನು ರಚಿಸಲು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಫೆಬ್ರವರಿ 1ರ ಶನಿವಾರದಂದು ಸಂಜೆ 4-30 ಗಂಟೆಗೆ ಸಭೆಯನ್ನು ಕರೆಯಲಾಗಿದೆ. ತಾಲೂಕಿನ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಮತ್ತು ವಿವಿಧ ಕನ್ನಡಪರ ಸಂಘಟನೆಗಳು ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸುವಂತೆ ಅಧ್ಯಕ್ಷ ಎನ್. ರಾಜಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.