ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಬಜೆಟ್‌ನಲ್ಲಿ ಜಿಲ್ಲಾ ಕೇಂದ್ರ ಘೋಷಣೆ ವಿಶ್ವಾಸ

Mainashree
Updated On : 31 Jan 2014, 11:34 am

ದೊಡ್ಡಬಳ್ಳಾಪುರ: ಬರುವ ಬಜೆಟ್ ಅಧಿವೇಶನದಲ್ಲೇ ದೊಡ್ಡಬಳ್ಳಾಪುರವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರವಾಗಿ ರಾಜ್ಯ ಸರ್ಕಾರ ಘೋಷಿಸುವ ವಿಶ್ವಾಸವಿದೆ ಎಂದು ಶಾಸಕ ಟಿ. ವೆಂಕಟರಮಣಯ್ಯ ಹೇಳಿದ್ದಾರೆ.
ಶುಕ್ರವಾರ ಇಲ್ಲಿನ ಪ್ರವಾಸಿ ಮಂದಿರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಜಿಲ್ಲೆಯ ಏಕೈಕ ಉಪವಿಭಾಗ, ನಗರಸಭೆ, ಶೈಕ್ಷಣಿಕ ಜಿಲ್ಲೆ ಎನಿಸಿರುವ ದೊಡ್ಡಬಳ್ಳಾಪುರ ಭೌಗೋಳಿಕವಾಗಿ ಮತ್ತು ಜನಸಂಖ್ಯೆಯ ಆಧಾರದಲ್ಲೂ ಇತರೆ ಎಲ್ಲ ತಾಲೂಕುಗಳಿಗಿಂತಲೂ ಸಾಕಷ್ಟು ಮುಂದಿದೆ. ಜಿಲ್ಲಾ ಸತ್ರ ನ್ಯಾಯಾಲಯ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಪೊಲೀಸ್ ಉಪಾಧೀಕ್ಷಕರ ಕಚೇರಿ, ಬ್ರಾಡ್‌ಗೇಜ್ ರೈಲು ಮಾರ್ಗ, ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ, ಸುಸಜ್ಜಿತ ಕೈಗಾರಿಕಾ ಪ್ರದೇಶ, ಉನ್ನತ ಉದ್ಯೋಗಾವಕಾಶಗಳು, ಶೈಕ್ಷಣಿಕ ಸಂಸ್ಥೆಗಳು ಸೇರಿದಂತೆ ಜಿಲ್ಲೆಯ 4 ತಾಲೂಕುಗಳಿಗೂ ಉತ್ತಮ ರಸ್ತೆ ಸಂಪರ್ಕ ಹೊಂದಿದೆ. ಇಲ್ಲಿಯವರೆಗೆ ರಾಜ್ಯದಲ್ಲಿ ನೂತನವಾಗಿ ಘೋಷಣೆಯಾಗಿರುವ ಎಲ್ಲ ಜಿಲ್ಲಾ ಕೇಂದ್ರಗಳು ಉಪವಿಭಾಗ ಕೇಂದ್ರಗಳೇ ಆಗಿವೆ. ಅಲ್ಲದೆ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಪಟ್ಟಣಗಳು ಈಗಾಗಲೇ ಬೆಂಗಳೂರು ನಗರದ ಭಾಗವಾಗಿ ಬೆಳೆಯುತ್ತಿವೆ. ಜಿಲ್ಲಾ ವ್ಯಾಪ್ತಿಯಲ್ಲಿ ಬೆಂಗಳೂರಿನ ಪ್ರಭಾವದಿಂದ ದೂರವಿರುವ ಮತ್ತು ಎಲ್ಲ ಜನರಿಗೆ ಸುಲಭದಲ್ಲಿ ಸರ್ಕಾರಿ ಕೆಲಸಗಳಿಗೆ ಅನುಕೂಲಸಿಂಧುವಾಗಿರುವ ತಾಲೂಕು ಇದೊಂದೇ. ಈ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ದೊಡ್ಡಬಳ್ಳಾಪುರ ಜಿಲ್ಲಾ ಕೇಂದ್ರವಾಗಿ ಹೊರಹೊಮ್ಮಬೇಕಿದೆ ಎಂದು ಸಿಎಂಗೆ ಮನವಿ ಮಾಡಲಾಗಿದೆ ಎಂದು ಅವರು ವಿವರಿಸಿದರು.
ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ದಿನೇಶ್‌ಗುಂಡೂರಾವ್, ಮಾಜಿ ಶಾಸಕ ಆರ್.ಜಿ.ವೆಂಕಟಾಚಲಯ್ಯ, ಕಾಂಗ್ರೆಸ್ ಮುಖಂಡರಾದ ಸಿ.ಡಿ.ಸತ್ಯನಾರಾಯಣಗೌಡ, ತಿ.ರಂಗರಾಜು, ಜಿ.ಲಕ್ಷ್ಮೀಪತಿ, ಸಿ.ಜಿ.ನಾಗೇಶ್, ಅಂಜನಮೂರ್ತಿ, ರಾಜೇಂದ್ರಕುಮಾರ್, ತೂಬಗೆರೆ ಷರೀಫ್,, ಟಿ.ಜಿ.ಮಂಜುನಾಥ್ ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement