ವಿವಿಧ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
ರಾಮನಗರ: ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2014-15ನೇ ಸಾಲಿನಲ್ಲಿ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗದ ವಿದ್ಯಾವಂತ ನಿರುದ್ಯೋಗಿ ಯುವಕ, ಯುವತಿಯರಿಗೆ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಎಂಎಸ್ ಎಸಿಸಿಪಿಎಲ್ ಸಂಸ್ಥೆಯಿಂದ ವಿವಿಧ ಕೋರ್ಸುಗಳಿಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬಿ.ಎಂ.ರಸ್ತೆ, 2ನೇ ಮಹಡಿ, ಜಿಲ್ಲಾ ಪಂಚಾಯತ್, ಭವನ, ರಾಮನಗರ ಜಿಲ್ಲೆ ಇಲ್ಲಿಂದ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜು.10ರೊಳಗೆ ಸದರಿ ಕಚೇರಿಗೆ ಸಲ್ಲಿಸಬಹುದು ಎಂದು ರಾಮನಗರ ಜಿಲ್ಲಾ ಹಿಂ. ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.