ಬೆಂಗಳೂರು ಗ್ರಾಮಾಂತರ

ರಜಪೂತ್ ಮಹಾಸಭಾಕ್ಕೆ ಆಯ್ಕೆ

ರಾಮನಗರ: ಜಿಲ್ಲಾ ರಾಣಾ ಪ್ರತಾಪ ಸಿಂಹ ರಜಪೂತ್ ಮಹಾಸಭಾ ಸಂಘದ ಅಧ್ಯಕ್ಷರಾಗಿ ವಾಸುದೇವ ಸಿಂಗ್ ಅವರು ಆಯ್ಕೆಯಾಗಿದ್ದಾರೆ. ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಯಾರ್ಡ್ ಆವರಣದಲ್ಲಿರುವ ಸಂಘದ ಕಚೇರಿಯಲ್ಲಿ ನಡೆದ ಕಾರ್ಯಕಾರಿ ಸಭೆಯಲ್ಲಿ  ವಾಸುದೇವ ಸಿಂಗ್ ಅವರನ್ನು ಸರ್ನಾನುಮತದಿಂದ ಆಯ್ಕೆ ಮಾಡಲಾಗಿದೆ. ಸಭೆಯಲ್ಲಿ ಪದಾಧಿಕಾರಿಗಳಾದ ಕೃಷ್ಣಸಿಂಗ್, ಗಣೇಶ್ಸಿಂಗ್, ಮಂಜುನಾಥಸಿಂಗ್, ನಾಗೇಂದ್ರ, ಅಮರನಾಥ್ ಸಿಂಗ್, ನಾಗರಾಜ ಸಿಂಗ್, ಲಕ್ಷ್ಮಣ್ಸಿಂಗ್, ಜೈಸಿಂಗ್, ಬಾಲಾಜಿಸಿಂಗ್, ರಾಜಾಸಿಂಗ್, ಮತ್ತಿತರರು ಭಾಗವಹಿಸಿದ್ದರು.  



ಅಪಘಾತ: ಬೈಕ್ ಸವಾರ ಸಾವು


ರಾಮನಗರ: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಸವಾರ ಗಾಯಗೊಂಡು ಆಸ್ಪತ್ರೆ ಸೇರಿರುವ ಘಟನೆ ತಾಲೂಕಿನ ತಿಮ್ಮಸಂದ್ರ ಗ್ರಾಮದ ಬಳಿ ಶನಿವಾರ ಮುಂಜಾನೆ ನಡೆದಿದೆ. ತಿಮ್ಮಸಂದ್ರ ಗ್ರಾಮದ ಶಿವರಾಜು(18) ಮೃತ ಯುವಕ. ಟೊಯೋಟಾ ಕಾರ್ಖಾನೆಯ ಉದ್ಯೋಗಿಯಾಗಿದ್ದ ಮೃತನು ಕೆಲಸಕ್ಕಾಗಿ ಬೈಕ್ನಲ್ಲಿ ರಾಮನಗರ-ಮಾಗಡಿ ರಸ್ತೆಯ ತಿಮ್ಮಸಂದ್ರ ಗೇಟ್ ಬಳಿ ತೆರಳುತ್ತಿದ್ದಾಗ ಎದುರಿನಿಂದ ಬಂದ್ ಸ್ಕಾರ್ಪಿಯೋ ಕಾರು ಡಿಕ್ಕಿಯೊಡೆದಿದೆ. ಅಪಘಾತದಲ್ಲಿ ಶಿವರಾಜುವಿನ ಮೇಲೆ ಕಾರು ಹರಿದಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತದಲ್ಲಿ ಬೈಕ್ನ ಹಿಂಬದಿ ಸವಾರ ಕೂಡ ಶಿವರಾಜು(20) ಎಂಬಾತನಾಗಿದ್ದು, ತೀವ್ರವಾಗಿ ಗಾಯಗೊಂಡಿರುವ ಆತನನ್ನು  ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಮನಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!