ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಸರ್ಕಾರಿ ಶಾಲೆಗೆ ಆಧುನಿಕ ವ್ಯವಸ್ಥೆ: ಶಾಸಕರ ಶ್ಲಾಘನೆ

Rashmi Kasaragodu
Updated On : 6 Jul 2014, 1:29 am

ನೆಲಮಂಗಲ: ಸುಮಾರು 100 ವರ್ಷಗಳ ಹಳೆಯ ಶಾಲೆ ಇದ್ದ ಜಾಗದಲ್ಲಿ ಭಾರತ್ ಎಲೆಕ್ಟ್ರಾನಿಕ್ಸ್ ಕಂಪನಿಯವರು ನೂತನ ಸುಸಜ್ಜಿತ ಕಟ್ಟಡ ನಿರ್ಮಿಸಿಕೊಟ್ಟಿದ್ದಾರೆ. ಸರ್ಕಾರಿ ಶಾಲೆಗೆ ಅತ್ಯಾಧುನಿಕ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದು ಶ್ಲಾಘನೀಯ ಎಂದು ಶಾಸಕ ಡಾ.ಕೆ. ಶ್ರೀನಿವಾಸಮೂರ್ತಿ ತಿಳಿಸಿದರು.
ಅವರು ಶನಿವಾರ ಪಟ್ಟಣದ ಕೋಟೆಬೀದಿಯಲ್ಲಿ ಬಿಇಎಲ್ ಕಾರ್ಖಾನೆಯವರು ನಿರ್ಮಿಸಿಕೊಟ್ಟ ಸರಕಾರಿ ಬಾಲಕಿಯರ ಶಾಲೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಶಾಲೆಗಳಲ್ಲಿ ಅತ್ಯಾಧುನಿಕ ಸೌಕರ್ಯವುಳ್ಳ ಮೌಲ್ಯಯುತ ಶಿಕ್ಷಣ ದೊರೆಯುತ್ತಿದೆ ಎನ್ನುವುದಕ್ಕೆ ಈ ಶಾಲೆ ಸಾಕ್ಷಿಯಾಗಿದೆ ಎಂದರು. ವಿಧಾನ ಪರಿಷತ್ ಸದಸ್ಯ ಇ.ಕೃಷ್ಣಪ್ಪ ಮಾತನಾಡಿ, ಸರಕಾರ ರು.20 ಸಾವಿರ ಕೋಟಿಯನ್ನು ಶಿಕ್ಷಣಕ್ಕೆ ವ್ಯಯಿಸುತ್ತಿದೆ. ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಒಳಗಾಗಿ ಮಕ್ಕಳನ್ನು ಮಾನಸಿಕವಾಗಿ ಕುಗ್ಗಿಸಿ ಪ್ರಾಪಂಚಿಕ ಜ್ಞಾನವಿಲ್ಲದಂತೆ ಮಾಡುತ್ತಿದ್ದಾರೆ ಎಂದರು.ಬಿ.ಇ.ಎಲ್.ನ ಪ್ರಧಾನ ವ್ಯವಸ್ಥಾಪಕ ನಟರಾಜ್ ಕೃಷ್ಣಪ್ಪ ಮಾತನಾಡಿ, ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಲು ತಿಳಿಸಿದರು. ಶಿಕ್ಷಕರ ಕಲ್ಯಾಣ ನಿಧಿ ಸಹ ನಿರ್ದೇಶಕ ವೆಂಕಟೇಶಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನಿರ್ದೇಶಕ ಕೆ.ಎಂ. ಗುರುರಾಜ್ ಮಾತನಾಡಿದರು.ಬಿಇಎಲ್ ಪ್ರಧಾನ ವ್ಯವಸ್ಥಾಪಕರಾದ ನಟರಾಜ್ ಕೃಷ್ಣಪ್ಪ, ವೀರೇಶ್ ಬೇವಿನಮರ, ಅರುಣಾಚಲಂ, ಸಿ.ಸಂತೋಷ್, ಕೆ.ಪಿ. ಗರ್ಗ್ ಅವರನ್ನು ಸನ್ಮಾನಿಸಲಾಯಿತು.  ಮಾಜಿ ಶಾಸಕ ಎಂ.ವಿ.ನಾಗರಾಜು, ತಹಸೀಲ್ದಾರ್ ಎಂ.ಸಿ.ನರಸಿಂಹಮೂರ್ತಿ, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ನಾರಾಯಣಸ್ವಾಮಿ, ಪುರಸಭೆ ಅಧ್ಯಕ್ಷ ನಾರಾಯಣ್, ಉಪಾಧ್ಯಕ್ಷೆ ಸುಜಾತಾ ಪ್ರಕಾಶ್, ಜಿ.ಪಂ.ಸದಸ್ಯೆ ಸುನಂದಾ ಶಿವಕುಮಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement