ವಿಶ್ವ ಜನಸಂಖ್ಯಾ ದಿನಾಚರಣೆ ಇಂದು
ರಾಮನಗರ: ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜು.11ರ ಬೆಳಗ್ಗೆ 10.30ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಕೇಂದ್ರದ ಅರ್ಕಾವತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮವನ್ನು ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ಉದ್ಘಾಟಿಸುವರು. ಶಾಸಕ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆ ವಹಿಸುವರು. ಸಂಸದ ಡಿ.ಕೆ. ಸುರೇಶ್, ಜಿ.ಪಂ. ಹಂಗಾಮಿ ಅಧ್ಯಕ್ಷ ಎಂ.ಕೆ. ಧನಂಜಯ, ಸ್ಥಾಯಿ ಸಮಿತಿ ಅಧ್ಯಕ್ಷ ರಘುಕುಮಾರ್, ತಾ.ಪಂ. ಹಂಗಾಮಿ ಅಧ್ಯಕ್ಷ ವೆಂಕಟರಂಗಯ್ಯ, ನಗರಸಭೆ ಅಧ್ಯಕ್ಷ ಮಹಮದ್ ಆರಿಫ್ ಖುರೇಷಿ, ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ್, ಜಿ.ಪಂ. ಸಿಇಒ ಡಾ. ಎಂ. ವಿ. ವೆಂಕಟೇಶ್ ಭಾಗವಹಿಸುವರು.