ವೀರಶೈವ ಲಿಂಗಾಯಿತ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರ
ರಾಮನಗರ: ವೀರಶೈವ ಲಿಂಗಾಯಿತ ಸರ್ಕಾರಿ ನೌಕರರ ಕ್ಷೇಮಾಭಿವಣದ್ಧಿ ಸಂಘದಿಂದ ಜು.13ರ ಬೆಳಗ್ಗೆ 11ಕ್ಕೆ 2014ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವೀರಶೈವ ಜನಾಂಗದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ನಡೆಯಲಿದೆ. ಕಾರ್ಯಕ್ರಮದಲ್ಲಿ ಹೊನ್ನಮ್ಮ ಗವಿಮಠದ ಶ್ರೀ ರುದ್ರಮುನಿ ಶಿವಾಚಾರ್ಯಸ್ವಾಮೀಜಿ ಸಾನಿಧ್ಯ ವಹಿಸುವರು. ನಿವೃತ್ತ ಪೊಲೀಸ್ ಆಯುಕ್ತ ಜ್ಯೋತಿಪ್ರಕಾಶ್ ಮಿರ್ಜಿ, ಬೆಂಗಳೂರು ಮಹಾನಗರ ಪಾಲಿಕೆಯ ಮಾಜಿ ಉಪ ಮಹಾಪೌರ ಸಿ.ಎಸ್. ಪುಟ್ಟರಾಜು, ಕಂಠೀರವ ಸ್ಟುಡಿಯೋದ ಮಾಜಿ ಅಧ್ಯಕ್ಷ ಎಂ.ರುದ್ರೇಶ್, ಎಂ.ಸಿ.ಎ ಮಾಜಿ ಅಧ್ಯಕ್ಷ ಜಿ.ಮರಿಸ್ವಾಮಿ, ವೀರಶೈವ ಮುಖಂಡ ಕಾ.ಪು. ಸಿದ್ದಲಿಂಗಸ್ವಾಮಿ, ಪೆನೇಷಿಯಾ ಆಸ್ಪತ್ರೆಯ ನಿರ್ದೇಶಕ ಆರ್. ಮಹಾಲಿಂಗಪ್ಪ, ಜ್ಯೋತಿಷಿ ರೇಣುಕಾರಾಧ್ಯ ಗೂರೂಜಿ, ಅಖಿಲ ಭಾರತ ವೀರಶೈವ ಮಹಾ ಸಭಾದ ರಾಷ್ಟ್ರೀಯ ಕಾರ್ಯದರ್ಶಿ ಎಂ.ಆರ್.ಉಮಾಪತಿ, ಯುವ ಘಟಕದ ಅಧ್ಯಕ್ಷ ತ್ರಿಶೂಲ್, ವೀರಶೈವ ಲಿಂಗಾಯಿತ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಚಿಕ್ಕಹೊನ್ನಯ್ಯ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.