ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ
ರಾಮನಗರ: ಹಿಂದುಳಿದ ವರ್ಗಗಳ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಐಎಎಸ್, ಐಪಿಎಸ್, ಬ್ಯಾಂಕಿಂಗ್ ಸೇರಿದಂತೆ ಇನ್ನಿತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತವಾಗಿ ಪರೀಕ್ಷಾ ಪೂರ್ವ ತರಬೇತಿ ನೀಡಲಿದೆ. ಪ್ರವರ್ಗ-1, ಹಿಂದುಳಿದ ವರ್ಗದ 2ಎ, 2ಬಿ, 3ಎ, 3ಬಿ ವಿದ್ಯಾರ್ಥಿಗಳು ತರಬೇತಿ ಪಡೆಯಲು ಅರ್ಹರಾಗಿದ್ದಾರೆ. ಪದವಿ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳು ತರಬೇತಿಗೆ ಅರ್ಜಿ ಸಲ್ಲಿಸಬಹುದು. ಪ್ರವರ್ಗ 1ರ ವಿದ್ಯಾರ್ಥಿಗಳಿಗೆ ರು.4.5 ಲಕ್ಷ ಹಾಗೂ ಹಿಂದುಳಿದ ವರ್ಗದವರಿಗೆ ರು.3.5 ಲಕ್ಷದೊಳಗೆ ಆದಾಯ ಮಿತಿ ಇರಬೇಕು. ಸಾಮಾನ್ಯ ಪರೀಕ್ಷೆ ಮೂಲಕ ತರಬೇತಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದವರಿಗೆ ಪ್ರಸಿದ್ಧ ತರಬೇತಿ ಕೇಂದ್ರಗಳಾದ ವಾಜಿರಾಂ, ರಾವ್ಸ್, ಎಎಲ್‌ಎಸ್ ಕೇಂದ್ರಗಳಲ್ಲಿ ವಸತಿ ಸೌಲಭ್ಯದೊಂದಿಗೆ ಉಚಿತ ತರಬೇತಿ ನೀಡಲಾಗುವುದು. ಅರ್ಜಿಯನ್ನು ಆನ್‌ಲೈನ್‌ನಲ್ಲಿ, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಇಲಾಖೆಯ ವೆಬ್‌ಸೈಟ್‌ಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಖುದ್ದಾಗಿ ಬಿಸಿಎಂ ಇಲಾಖೆ ಕಚೇರಿ . ಮೊ.9480818010.