ಬೆಂಗಳೂರು ಗ್ರಾಮಾಂತರ

ಶಿಕ್ಷಕರ ಸಂಘಕ್ಕೆ ಆಯ್ಕೆ

ರಾಮನಗರ: ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಪದಾಧಿಕಾಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ 7 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರದ ಸರ್ಕಾರಿ ನೌಕರರ ಸ್ಫೂರ್ತಿ ಭವನದಲ್ಲಿ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ನೂತನ ಪದಾಧಿಕಾರಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.
 ಸಂಘದ ಬೈಲಾ ಪ್ರಕಾರ 7 ಮಂದಿ ಪದಾಧಿಕಾರಿಗಳನ್ನು ಆಯ್ಕೆಮಾಡಬೇಕಾಗಿದೆ. ಈ ಏಳು ಜನ ನಿರ್ದೇಶಕರು ಚುನಾವಣೆಯಲ್ಲಿ ಸಂಘದ ಅಧ್ಯಕ್ಷ ಸ್ಥಾನ ಸೇರಿದಂತೆ ತಲಾ ಒಂದೊಂದು ಪದಾಧಿಕಾರಿ ಸ್ಥಾನಕ್ಕೆ ನಾಮಪತ್ರಗಳನ್ನು ಸಲ್ಲಿಸಿದ್ದರು, ಇವರ ಪ್ರತಿ ಸ್ಪರ್ಧಿಯಾಗಿ ಯಾರೂ ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಅಯ್ಕೆಯನ್ನು ಘೋಷಿಸಲಾಯಿತು.
 ಯಾವುದೇ ಸಂಘಟನೆಗೆ ಒಗ್ಗಟ್ಟು ಅತಿ ಮುಖ್ಯ. ಸಣ್ಣ-ಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗಿರಿಸಿ ಸಂಘದ ಅಭಿವೃದ್ಧಿಗೆ ಕ್ರಿಯಾಶೀಲರಾಗಿ ದುಡಿಯಬೇಕು. ಪದಾಧಿಕಾರಿಗಳು ಸೇವಾ ಮನೋಭಾವವನ್ನು ಬೆಳೆಸಿಕೊಳ್ಳುವ ಮೂಲಕ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ನಿಕಟಪೂರ್ವ ಜಿಲ್ಲಾಧ್ಯಕ್ಷ ಆರ್.ಕೆ. ಬೈರಲಿಂಗಯ್ಯ ಸಲಹೆ ನೀಡಿದರು.ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಚುನಾವಣಾಧಿಕಾರಿ ಕರೀಗೌಡ, ಪ್ರಾಂಶುಲಾಪರ ಸಂಘದ ಅಧ್ಯಕ್ಷ ವನರಾಜು ಸೇರಿದಂತೆ ಮತ್ತಿತರರು ನೂತನ ಪದಾಧಿಕಾರಿಗಳನ್ನು ಅಭಿನಂದಿಸಿದರು.
ನೂತನ ಪದಾಧಿಕಾರಿಗಳು: ಎಲ್.ಸಿ.ಮಹದೇವಯ್ಯ(ಅಧ್ಯಕ್ಷರು), ಆರ್.ರುದ್ರೇಶಯ್ಯ(ಉಪಾಧ್ಯಕ್ಷ), ಎಸ್.ಬಿ.ಬಸವರಾಜಪ್ಪ(ಕಾರ್ಯದರ್ಶಿ),  ಟಿ.ಎಂ.ಪ್ರಕಾಶ್ (ಖಜಾಂಚಿ), ಎಂ.ಎನ್.ದೇವರಾಜ (ಸಹ ಕಾರ್ಯದರ್ಶಿ), ಆರ್.ಸಿ.ವಿಜಯಕುಮಾರ್ (ಸಂಘಟನಾ ಕಾರ್ಯದರ್ಶಿ), ಜಿ.ಶಿವಶಂಕರ್ (ರಾಜ್ಯ ಪರಿಷತ್ ಸದಸ್ಯ).

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!