ಬೆಂಗಳೂರು ಗ್ರಾಮಾಂತರ

ಶೌಚಾಲಯ ಆಂದೋಲನ

ರಾಮನಗರ: ರಾಮನಗರ ಜಿಲ್ಲೆಯನ್ನು ಬಯಲು ಬಹಿರ್ದೆಸೆ ಮುಕ್ತವಾಗಿಸಲು ಜಿಲ್ಲಾ ಪಂಚಾಯಿತಿ ಕಾರ್ಯೋನ್ಮುಖವಾಗಿದೆ ಎಂದು ಜಿ.ಪಂ. ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.
ಸುಗ್ಗನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಹಾಗಲಹಳ್ಳಿ ಮತ್ತು ಲಿಂಗೇಗೌಡನದೊಡ್ಡಿ ಗ್ರಾಮಗಳಲ್ಲಿ ಶೌಚಾಲಯ ನಿರ್ಮಾಣ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಮನಗರದಲ್ಲಿ ಪ್ರತಿ ಗ್ರಾಮದಲ್ಲೂ ಕನಿಷ್ಠ 100 ಶೌಚಾಲಯಗಳನ್ನು ನಿರ್ಮಿಸುವಂತೆ ಎಲ್ಲ ಗ್ರಾ.ಪಂ.ಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.ಜಿಲ್ಲೆಯಲ್ಲಿ 2.25 ಲಕ್ಷ ಕುಟುಂಬಗಳಿದ್ದು, ಈ ಪೈಕಿ 1.10 ಲಕ್ಷ ಕುಟುಂಬಗಳು ಶೌಚಾಲಯ ಹೊಂದಿವೆ. ಬಾಕಿ ಇರುವ 1.15 ಲಕ್ಷ ಕುಟುಂಬಗಳು ಶೌಚಾಲಯ ನಿರ್ಮಿಸಿಕೊಳ್ಳುವಂತೆ ಅರಿವು ಮೂಡಿಸಲಾಗುತ್ತಿದೆ. ಈ ಕಾರ್ಯಕ್ಕೆ ಜಿ.ಪಂ., ಗ್ರಾ.ಪಂ., ತಾ.ಪಂ. ಸದಸ್ಯರು ಸಹಕಾರ ನೀಡಬೇಕು. ಶೌಚಾಲಯ ನಿರ್ಮಾಣ ಆಂದೋಲನದ ಯಶಸ್ಸಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.  ಸಿಇಒ ವೆಂಕಟೇಶ್ ಅವರು ಪ್ರತಿ ಮನೆಗೂ ತೆರಳಿ ಶೌಚಾಲಯದ ನಿರ್ಮಾಣದ ಮಹತ್ವದ ಬಗ್ಗೆ ಅರಿವು ಮೂಡಿಸಿದರು. ನಿರ್ಮಾಣ ಹಂತದಲ್ಲಿರುವ ಶೌಚಾಲಯಗಳನ್ನು ವೀಕ್ಷಿಸಿ ಎಲ್ಲಾ ಫಲಾನುಭವಿಗಳಿಗೂ ಕಾರ್ಯಾದೇಶ ವಿತರಿಸಿದರು. ಬಾಕಿ ಉಳಿದಿರುವ ಕುಟುಂಬಗಳು ಆದಷ್ಟು ಬೇಗನೆ ಶೌಚಾಲಯಗಳನ್ನು ನಿರ್ಮಿಸಿಕೊಂಡು ಗ್ರಾಮವನ್ನು ಬಯಲು ಬಹಿರ್ದೆಸೆ ಮುಕ್ತವಾಗಿಸಲು ಗ್ರಾಮಸ್ಥರಲ್ಲಿ ಮನವಿ ಮಾಡಿದರು.  
ಈ ಸಂದರ್ಭದಲ್ಲಿ ಜಿ.ಪಂ. ಉಪ ಕಾರ್ಯದರ್ಶಿ ಆರ್. ಲತಾ, ಯೋಜನಾ ನಿರ್ದೇಶಕ ಬಸವರಾಜಪ್ಪ, ತಾ.ಪಂ. ಇಒ ಟಿ.ಎಚ್.ವೆಂಕಟೇಶ್, ಗ್ರಾ.ಪಂ. ಅಧ್ಯಕ್ಷ ಸಿ.ಎಸ್.ಲೋಕೇಶ್, ಉಪಾಧ್ಯಕ್ಷೆ ಗೌರಮ್ಮ, ಪಿಡಿಒ ಲಕ್ಷ್ಮಿ, ಎಚ್.ವಿ.ರಾಜು, ತಿಮ್ಮಯ್ಯ ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ವಿವಾದ: ಚುನಾವಣಾ ಆಯೋಗ, ಜ್ಞಾನೇಶ್ ಕುಮಾರ್​ಗೆ ಸುಪ್ರೀಂ ಕೋರ್ಟ್ ನೋಟಿಸ್; ರಾಹುಲ್ ಗಾಂಧಿಗೂ ತರಾಟೆ

'ಮೋದಿ ವಿರೋಧಿ ಪ್ರತಿಭಟನೆಗಳಿಗೆ ಅಮೆರಿಕನ್ನರ ಆರ್ಥಿಕ ನೆರವು?'; Mary Millben ಸ್ಫೋಟಕ ಆರೋಪ!

‘ಮೋದಿಗೆ ಅಮೆರಿಕ ಬೇಕಿಲ್ಲ, ಆದರೆ ಅಮೆರಿಕಕ್ಕೆ ಮೋದಿ ಬೇಕು'.. 'ನಿಮ್ಮನ್ನು ಬಳಸಿಕೊಂಡು ಕೈ ಬಿಡುತ್ತಾರೆ': ಅಭಿಜಿತ್ ದೀಪ್ಕೆಗೆ ಹಾಲಿವುಡ್ ಗಾಯಕಿ ಎಚ್ಚರಿಕೆ

CJP ಪ್ರತಿಭಟನೆಯಲ್ಲಿ ಭಾಗಿ: ನಟ Imran Khanಗೆ ಮುಂಬೈ ಪೊಲೀಸರಿಂದ 'Leave India' ನೋಟಿಸ್, ಅ.28ರೊಳಗೆ ಭಾರತ ತೊರೆಯುವಂತೆ ಗಡುವು..!

ಜಿಯೋ - ಸ್ಟಾರ್‌ಲಿಂಕ್‌, ಸ್ಟಾರ್ ವಾರ್ ಹಿಂದಿನ ಆರ್ಥಿಕತೆ! (ಹಣಕ್ಲಾಸು)