ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಪಿಯುಸಿ ಪ್ರವೇಶಕ್ಕೆ ದಿನಾಂಕ ವಿಸ್ತರಣೆ

Mainashree
Updated On : 24 Jul 2014, 11:51 am

ರಾಮನಗರ: ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳ ಪ್ರವೇಶಾತಿ ದಿನಾಂಕವನ್ನು ಜು.28ರವರೆಗೆ ವಿಸ್ತರಿಸಲಾಗಿದೆ. ಏಪ್ರಿಲ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಪ್ರಥಮ ಪಿಯುಸಿಗೆ ದಾಖಲಾಗಲು ದಂಡ ಶುಲ್ಕ ರು. 504 ಮತ್ತು ವಿಶೇಷ ದಂಡ ಶುಲ್ಕ ರು. 1680 ಒಟ್ಟು ರು. 2184 ಪಾವತಿಸಬೇಕಿದೆ. ಜೂನ್ ತಿಂಗಳಲ್ಲಿ ನಡೆದ ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು .504 ದಂಡ ಶುಲ್ಕ ಪಾವತಿಸಿ ಪ್ರವೇಶಾತಿ ಪಡೆಯಬಹುದು. ಅಂತೆಯೇ ಪ್ರಥಮ ಪಿಯುಸಿ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಗೆ ದಾಖಲಾಗಲು 2184 ಪಾವತಿಸಿ ದಾಖಲಾತಿ ಪಡೆಯಬಹುದಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ  ಪ್ರಕಟಣೆ ತಿಳಿಸಿದೆ.
ಗಂಗೋಂಡನಹಳ್ಳಿ ಬಳಿ ಚಿರತೆ ಹಾವಳಿ
ನೆಲಮಂಗಲ: ತಾಲೂಕಿನ ದಾಸನಪುರ ಹೋಬಳಿ ಗಂಗೋಂಡನಹಳ್ಳಿ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕಳೆದ ಒಂದು ವಾರದಿಂದ ಗ್ರಾಮದ ಸುತ್ತಮುತ್ತಲಿನ ಜಮೀನಿನಲ್ಲಿ ರಾತ್ರಿ ವೇಳೆ ಚಿರತೆ ಕಾಣಿಸಿಕೊಂಡು ಹಸು,  ಕುರಿ, ಮೇಕೆಗಳನ್ನು ತಿಂದು ಹಾಕಿದೆ. ಅರಣ್ಯಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥ ಗೋವಿಂದಪ್ಪ ದೂರಿದ್ದಾರೆ. ಶೀಘ್ರ ಅರಣ್ಯಾಧಿಕಾರಿಗಳು ಚಿರತೆಯನ್ನು ಸೆರೆ ಹಿಡಿಯಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥ ನಿರಂಜನ್ ಒತ್ತಾಯಿಸಿದ್ದಾರೆ.
ಕಲ್ಲು ಗಣಿಗಾರಿಕೆ ಘಟಕಗಳ ಮೇಲೆ ಲೋಕಾಯುಕ್ತ ದಾಳಿ
ನೆಲಮಂಗಲ: ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಘಟಕಗಳ ಮೇಲೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಅಶ್ವಿನಿ ನೇತೃತ್ವದಲ್ಲಿ ದಿಢೀರ್ ದಾಳಿ ನಡೆಸಿರುವ ಘಟನೆ ಗುರುವಾರ ನಡೆದಿದೆ. ಅಕ್ರಮವಾಗಿ ತಾಲೂಕಿನ ಸೋಂಪುರ ಹೋಬಳಿ ಕಲ್ಲನಾಯಕನಹಳ್ಳಿ, ಅಗಳಕುಪ್ಪೆ ಗ್ರಾಮದಲ್ಲಿ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಸಾರ್ವಜನಿಕ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತರು ದಾಳಿ ನಡೆಸಿ ಗಣಿಗಾರಿಕೆ ನಡೆಸಲು ಬಳಸುತ್ತಿದ್ದ ಹಿಟಾಚಿ, ಜಿ.ಸಿ.ಬಿ, ಟ್ರಾಕ್ಟರ್‌ಗಳನ್ನು ವಶಪಡಿಸಿಕೊಂಡು ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದವರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗಾಳಿಪಟ ಸ್ಪರ್ಧೆ 27ಕ್ಕೆ
ರಾಮನಗರ:  ಕರ್ನಾಟಕ ಜಾನಪದ ಪರಿಷತ್ತು, ತುಮಕೂರು ಜಿಲ್ಲಾಡಳಿತ ಹಾಗೂ ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ ಜು.27ರಂದು ತುಮಕೂರಿನ ಬಿ.ಎಚ್.ರಸ್ತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಗಾಳಿಪಟ ಸ್ಪರ್ಧೆ ನಡೆಯಲಿದೆ ಎಂದು ಜಾನಪದ ಲೋಕದ ಸಂಯೋಜನಾಧಿಕಾರಿ ಡಾ. ಕುರುವ ಬಸವರಾಜು ತಿಳಿಸಿದ್ದಾರೆ.
ಉಚಿತ ಯೋಗ ಶಿಬಿರ
ಹೊಸಕೋಟೆ: ಪಟ್ಟಣದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿನ ಸ್ವಾಮಿ ವಿವೇಕಾನಂದ ಯೋಗ ಶಿಕ್ಷಣ ಸಮಿತಿ ವತಿಯಿಂದ ಜು. 28ರ ಸೋಮವಾರದಿಂದ 40 ದಿನಗಳ ಅವಧಿಯ ಉಚಿತ ಯೋಗ ಶಿಬಿರ ಏರ್ಪಡಿಸಲಾಗಿದೆ.ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕ ಸಮಯ ನಿಗದಿ ಪಡಿಸಲಾಗಿದ್ದು ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗೆ ದೂ.9448310491, 9341562795 ಸಂಪರ್ಕಿಸಬಹುದು.

-

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement