ಬಣ್ಣಾರಿ ಕಾರ್ಖಾನೆ ಬಾಕಿ ಕೊಡಿಸಲು ಆಗ್ರಹ
ಮೈಸೂರು: ನಂಜನಗೂಡಿನ ಅಳಗಂಚಿಯಲ್ಲಿರುವ ಬಣ್ಣಾರಿ ಕಾರ್ಖಾನೆಯಿಂದ ರೈತರಿಗೆ ಬರಬೇಕಾದ ಬಾಕಿ ಹಣವನ್ನು ಕೊಡಿಸುವಂತೆ ಕಬ್ಬು ಬೆಳೆಗಾರರು ಮಂಗಳವಾರ ಹೆಚ್ಚುವರಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ಬಣ್ಣಾರಿ ಕಾರ್ಖಾನೆಗೆ ಸರಬರಾಜು ಮಾಡಿದ ಕಬ್ಬ ಬೆಳೆಗಾರರಿಗೆ ಕಾನೂನು ಬದ್ಧವಾಗಿ 15 ದಿನಗಳ ಒಳಗಾಗಿ ಹಣ ಪಾವತಿಸಬೇಕಾಗಿತ್ತು. ಆದರೆ ಸಕ್ಕರೆ ಕಾರ್ಖಾನೆಯವರು 2013ರ ಕಾನೂನು ನಿಯಮ ಪಾಲಿಸದೆ ವಿಳಂಬವಾಗಿ ರೈತರಿಗೆ ಹಣ ಪಾವತಿಸುತ್ತಿದ್ದಾರೆ ಎಂದು ಆರೋಪಿಸಿದರು.