ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಸೌಲತ್ತು ವಿತರಿಸಲು ಕ್ರಮ ಕೈಗೊಳ್ಳಿ

Srinivasa Murthy VN
Updated On : 5 Jun 2014, 12:05 pm

ಮಾಗಡಿ:  ಸರ್ಕಾರದ ಸೌಲತ್ತುಗಳನ್ನು ಸಮರ್ಪಕವಾಗಿ ವಿತರಿಸಲು ಇಲಾಖೆ ಅಧಿಕಾರಿಗಳು ಪ್ರಾಮಾಣಿಕವಾಗಿ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯ್ತಿ  ಸದಸ್ಯ ಕೆ.ಮುದ್ದುರಾಜ ಯಾದವ್ ನುಡಿದರು.
    ಅವರು ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿ ಏರ್ಪಡಿಸಿದ್ದ ಕಸಬಾ ಹೋಬಳಿ ಮಟ್ಟದ 2ನೇ ಹಂತದ ಭೂ ಚೇತನ ಯೋಜನೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ರೈತರಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ, ಯಂತ್ರೋಪಕರಣ ಸೇರಿದಂತೆ ಸಮಗ್ರ ಪೋಷಕಾಂಶಗಳ ನಿರ್ವಹಣೆ ಕುರಿತು ಸಮಗ್ರ ಮಾಹಿತಿ ನೀಡುವ ಮೂಲಕ ರೈತರಲ್ಲಿ ಭೂಚೇತನ ಯೋಜನೆ ಕಾರ್ಯಕ್ರಮ ಕುರಿತು ಜಾಗೃತಿ ಮೂಡಿಸಬೇಕು ಎಂದರು.
   ತಾ.ಪಂ. ಅಧ್ಯಕ್ಷತೆ ಅರುಂಧತಿ ಚಿಕ್ಕಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
 ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಕೆ.ಎಚ್. ಕೃಷ್ಣಮೂರ್ತಿ ಮಾತನಾಡಿ ಕೃಷಿಕ ಸಮಾಜದ ಸರ್ಕಾರದ ಯೋಜನೆಯನ್ನು ಪಡೆದುಕೊಳ್ಳಲು ನಿರ್ದೇಶಕರ ಸಹಕಾರ ಪಡೆಯಬಹುದು ಎಂದರು.
ತಾಲೂಕಿನಲ್ಲಿ ಬಿತ್ತನೆ ಬೀಜದ ಕೊರತೆ ಇಲ್ಲ ಎಂದು ಸಹಾಯಕ ಕೃಷಿ ನಿರ್ದೇಶಕ ಎಚ್.ಸಿ. ಕೃಷ್ಣಪ್ಪ ತಿಳಿಸಿದರು.  ಚಂದೂರಾಯನಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ. ಕೇಶವರೆಡ್ಡಿ ಮಾತನಾಡಿ ಕೃಷಿಯಲ್ಲಿ ಸಮಗ್ರ ಪೋಷಕಾಂಶ ಬಳಸಿ, ಮಣ್ಣಿನ ಫಲವತ್ತತೆ ಹೆಚ್ಚಿಸಿಕೊಂಡರೆ ಸಾಲದು, ಕೃಷಿಯಲ್ಲಿ ನೀರಿನ ಸಂರಕ್ಷಣೆ, ಸಸ್ಯ ಸಂರಕ್ಷಣೆ ಜತೆಗೆ ಕೀಟ ಹತೋಟಿ ಅತಿ ಮುಖ್ಯ ಎಂದರು.
  ತಾ.ಪಂ. ಮಾಜಿ ಅಧ್ಯಕ್ಷ ಹೆಬ್ಬಾಳಪಾಳ್ಯ ನಾಗರಾಜು, ಕೃಷಿಕ ಸಮಾಜದ ನಿರ್ದೇಶಕ ನಂದಿ ನರಸಿಂಹಮೂರ್ತಿ, ಪಶು ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸಿ. ರಾಜಶೇಖರ್, ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಸುಬ್ರಹ್ಮಣ್ಯ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ  ಎಚ್. ಆರ್. ಶಂಕರ್, ಕೃಷಿ ಅಧಿಕಾರಿಗಳಾದ ಹರಿಶಂಕರ್, ರೂಪಶ್ರೀ, ಅನುವುಗಾರರು, ರೈತರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement