ರಾಮದಾಸ್‌ಗೆ ಸಮನ್ಸ್
ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿದ್ದ ನಿವೃತ್ತ ಐಎಎಸ್ ಅಧಿಕಾರಿ ಕೆ.ಎಸ್.ಪ್ರಭಾಕರ್‌ಗೆ ಜಾಮೀನು ರಹಿತ ಬಂಧನ ಹಾಗೂ ಮಾಜಿ ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ. ರಾಮದಾಸ್ ವಿರುದ್ಧ ನಗರದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಸಮನ್ಸ್ ಹೊರಡಿಸಿದೆ. 2012ರ ನವೆಂಬರ್ 21ರಂದು ವಿಧಾನಸೌಧದಲ್ಲಿ ಸಚಿವರ ಮುಂದೆ ತನ್ನ ಮೇಲೆ ಸೇವಾ ನಿರತ ಸ್ನಾತಕೋತ್ತರ ವಿದ್ಯಾರ್ಥಿ ಡಾ.ಕೆ.ಎಸ್.ಯತೀಶ್ ಹಲ್ಲೆ ನಡೆಸಿದ್ದಾರೆ ಎಂದು ಪ್ರಭಾಕರ್ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಯತೀಶ್ ಅವರನ್ನು ಬಂಧಿಸಿದ್ದ ವಿಧಾನಸೌಧ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಯತೀಶ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಪ್ರಕರಣ ಸಂಬಂಧ ನಗರದ 8ನೇ ಅಪರ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಆದರೆ, ಕಳೆದ ಒಂದುವರೆ ವರ್ಷಗಳಿಂದ ದೂರುದಾರ ಪ್ರಭಾಕರ್, ಸಾಕ್ಷಿದಾರ ರಾಮದಾಸ್ ನ್ಯಾಯಾಲಯದ ಮುಂದೆ ಹಾಜರಾಗಿಲ್ಲ. ಹೀಗಾಗಿ ನ್ಯಾಯಾಧೀಶರು ಜಾಮೀನುರಹಿತ ವಾರಂಟ್ ಹೊರಡಿಸಿದ್ದಾರೆ.