ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಹಿಂದಿ ಹೇರಿಕೆ ವಿರುದ್ಧ ಕನ್ನಡ ಸಂಘಗಳ ಪ್ರತಿಭಟನೆ

Mainashree
Updated On : 22 Jun 2014, 11:32 am

ಬೆಂಗಳೂರು: ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯನ್ನು ಖಂಡಿಸಿ ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟ ಸದಸ್ಯರು ಪುಟ್ಟಣ್ಣಚೆಟ್ಟಿ ಪುರಭವನ ಎದುರು ಭಾನುವಾರ ಪ್ರತಿಭಟನೆ ನಡೆಸಿದರು.ದಕ್ಷಿಣ ಭಾರತದ ರಾಜ್ಯಗಳ ಭಾಷೆಗಳಿಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಹಿಂದಿ ಭಾಷೆಗಿಂತಲೂ ಪ್ರಾಚೀನ ಇತಿಹಾಸ ಹೊಂದಿರುವ ಕನ್ನಡ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಹಲವು ದಕ್ಷಿಣ ಭಾರತದ ಭಾಷೆಗಳು ತನ್ನದೇ ಆದ ವಿಶೇಷತೆ ಹೊಂದಿವೆ. ಭಾಷೆಯೊಂದಿಗೆ ರಾಜ್ಯಗಳಲ್ಲಿ ಸಂಸ್ಕೃತಿ, ಆಚರಣೆ, ಆಚಾರ-ವಿಚಾರಗಳು ಹಾಸು ಹೊಕ್ಕಾಗಿವೆ. ಹೀಗಿರುವಾಗ ಕೇಂದ್ರ ಸರ್ಕಾರ ಜನರ ಮೇಲೆ ಹಿಂದೆ ಹೇರಿಕೆ ಮಾಡುವುದು ಸರಿಯಲ್ಲ. ಭಾಷಾವಾರು ಪ್ರಾಂತ್ಯಗಳ ರಚನೆ ಹಿನ್ನೆಲೆಯಲ್ಲಿ ಒಕ್ಕೂಟ ವ್ಯವಸ್ಥೆಗೆ ಧಕ್ಕೆಯಾಗುವ ಹಿಂದಿ ಹೇರಿಕೆಯನ್ನು ಒಕ್ಕೂಟ ವಿರೋಧಿಸುತ್ತದೆ ಎಂದು ಪ್ರತಿಭಟನಕಾರರು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement