ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಸುಗಮ ಸಂಚಾರಕ್ಕೆ ಮೇಲ್ಸೇತುವೆ ರಸ್ತೆ ಅಗಲೀಕರಣ ಅನಿವಾರ್ಯ

Srinivasa Murthy VN
Updated On : 4 Mar 2014, 12:59 pm

ದೇವನಹಳ್ಳಿ:  ಬೆಂಗಳೂರು ಸೇರಿದಂತೆ ನಗರದ ಸುತ್ತಮುತ್ತಲ ರಸ್ತೆಗಳ ಸಂಚಾರ ವ್ಯವಸ್ಥೆ ಸುಗಮಗೊಳಿಸಲು ಮೇಲ್ಸೇತುವೆ ರಸ್ತೆ ಅಗಲೀಕರಣ ಅನಿವಾರ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ದೇವನಹಳ್ಳಿ ರಾ.ಹೆದ್ದಾರಿಯ ಸಾದಹಳ್ಳಿ ಟೋಲ್ ಫ್ಲಾಜಾ ಬಳಿ ಕೊಲಂಬಿಯ ಆಸ್ಪತ್ರೆಯಿಂದ  ವಿಮಾನ ನಿಲ್ದಾಣದವರೆಗೆ ನಿರ್ಮಾಣವಾಗಿರುವ ಷಟ್‌ಪಥ ರಸ್ತೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಇಲ್ಲಿನ ವಿಮಾನ ನಿಲ್ದಾಣ ಆರಂಭಗೊಂಡ ನಂತರ, ದಿನದ 24 ಗಂಟೆಯಲ್ಲಿ 15 ಸಾವಿರ ವಾಹನಗಳು ವಿಮಾನ ನಿಲ್ದಾಣ ಮಾರ್ಗದಲ್ಲಿ ಸಂಚರಿಸುತ್ತವೆ. 22.12 ಕಿ.ಮೀಟರ್ ಉದ್ದದ ಮೇಲ್ಸೇತುವೆ ಅಭಿವೃದ್ಧಿಗೆ 680 ಕೋಟಿ ವೆಚ್ಚವಾಗಿದ್ದು ಎರಡು ಕಡೆ ಸರ್ವೀಸ್ ರಸ್ತೆ  ಅಭಿವೃದ್ಧಿಪಡಿಸಲಾಗಿದೆ ಎಂದರು.
ವಿಧಾನಸೌಧದಿಂದ ಬಸವೇಶ್ವರ ಸರ್ಕಲ್ ಮೂಲಕ ವಿಮಾನ ನಿಲ್ದಾಣದವರೆಗೆ ರಸ್ತೆ ಅಭಿವೃದ್ಧಿ ಗಾಗಿ 1100 ಕೋಟಿ ರು. ಮೀಸಲಿಡಲಾಗಿದೆ ಎಂದರಲ್ಲದೆ ರಸ್ತೆಗಳ ಅಭಿವೃದ್ಧಿ ಜೊತೆಯಲ್ಲಿ ಅಕ್ಕಪಕ್ಕ ಗ್ರಾಮಗಳ ಮತ್ತು ಬಡಾವಣೆಗಳ ಆರ್ಥಿಕ ಮಟ್ಟ ಸುಧಾರಣೆಯಾಗಲಿವೆ. ಈ ಹೆದ್ದಾರಿಯ ಅಭಿವೃದ್ಧಿಗೆಸಹಕಾರ ನೀಡಿದ ಕೇಂದ್ರ ಸರ್ಕಾರದ ಎಲ್ಲ ಸಚಿವರನ್ನು ಅಭಿನಂದಿಸುತ್ತೇನೆ ಎಂದರು.
ಕೇಂದ್ರ ಸಚಿವರಾದ ಎಂ. ವೀರಪ್ಪ ಮೊಯ್ಲಿ, ಕೆ.ಎಚ್.ಮುನಿಯಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ, ಲೋಕೋಪಯೋಗಿ ಇಲಾಖೆ ಸಚಿವ ಎಚ್.ಸಿ ಮಹದೇವಪ್ಪ  ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement