ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಜಿಲ್ಲಾ ಸಮ್ಮೇಳನಾಧ್ಯಕ್ಷರ ಹೇಳಿಕೆ ಪ್ರತಿಗೆ ಬೆಂಕಿ ಹಚ್ಚಿ ಪ್ರತಿಭಟನೆ

Srinivasa Murthy VN
Updated On : 5 Mar 2014, 12:45 pm

ದೇವನಹಳ್ಳಿ: ದೊಡ್ಡಬಳ್ಳಾಪುರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರು ದೊಡ್ಡಬಳ್ಳಾಪುರ ಜಿಲ್ಲಾ ಕೇಂದ್ರಕ್ಕೆ ಸೂಕ್ತ ಎಂದು ಹೇಳಿಕೆ ನೀಡಿರುವುದನ್ನು ದೇವನಹಳ್ಳಿ ತಾಲೂಕು ಜಿಲ್ಲಾ ಹೋರಾಟ ಸಮಿತಿ ಕಾರ್ಯಕರ್ತರು ಖಂಡಿಸಿ ಮಂಗಳವಾರ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ನಂತರ ಸಮ್ಮೇಳನಾಧ್ಯಕ್ಷರ ಹೇಳಿಕೆಯ ಪ್ರತಿಯನ್ನು ಸುಟ್ಟು ಪ್ರತಿಭಟಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಮ್ಮೇಳನ ಕೇವಲ ದೊಡ್ಡಬಳ್ಳಾಪುರಕ್ಕೆ ಮಾತ್ರ ಸೀಮಿತವಾಗದೆ ದೇವನಹಳ್ಳಿ, ಹೊಸಕೋಟೆ ಮತ್ತು ನೆಲಮಂಗಲ ತಾಲೂಕುಗಳಿಗೆ ಸೇರಿದ್ದಾಗಿದ್ದು, ಸಮ್ಮೇಳನಾಧ್ಯಕ್ಷ ಎ.ಓ.ಆವಲಮೂರ್ತಿ ತಾಲೂಕು ಸಮ್ಮೇಳನದಲ್ಲಿ ಮಾತನಾಡುವ ಹಾಗೆ ಜಿಲ್ಲಾ ಸಮ್ಮೇಳನದಲ್ಲಿ ಹೇಳಿಕೆ ನೀಡಿರುವುದು ದೇವನಹಳ್ಳಿ ತಾಲೂಕಿನ ಜನರ ಭಾವನೆಗಳಿಗೆ ಧಕ್ಕೆಯುಂಟುಮಾಡಿದೆ ಎಂದು ಜಿಲ್ಲಾ ಹೋರಾಟ ಸಮಿತಿ ಮುಖ್ಯ ಸಂಚಾಲಕ ಬಿ.ಕೆ.ಶಿವಪ್ಪ ಆರೋಪಿಸಿದರು. ಸಮ್ಮೇಳಾನಾಧ್ಯಕ್ಷರು ಜಿಲ್ಲೆಗೆ ಸಂಬಂಧಪಟ್ಟಂತೆ ನಾಡು, ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿಗಳ ಬಗ್ಗೆ ಮಾತನಾಡಬೇಕಿತ್ತು ಎರಡು ತಾಲೂಕುಗಳ ಜನರ ಭಾವನೆಗಳಿಗೆ ಮಸಿ ಬಳಿಯುವ ಕೆಲಸ ಮಾಡಬಾರದು ಎಂದು ತಿಳಿಸಿದರು. ಸಮ್ಮೇಳನಾಧ್ಯಕ್ಷ ಆವಲಮೂರ್ತಿ ತಮ್ಮ ಹೇಳಿಕೆ ವಾಪಸ್ ಪಡೆದು ದೇವನಹಳ್ಳಿ ಜನತೆಯ ಕ್ಷಮೆ ಕೇಳಬೇಕು ಅಲ್ಲದೆ ಜಿಲ್ಲಾಧ್ಯಕ್ಷ ಹುಲಿಕಲ್ ನಟರಾಜ್ ಸಹ ಜವಾಬ್ದಾರರಾಗಿರುತ್ತಾರೆ ಎಂದರು.

'ಕ್ರೀಡೆ ಜಾತಿ, ಧರ್ಮದ ಸಂಕೋಲೆ ಮೀರಿದೆ'
ನೆಲಮಂಗಲ:
ಕ್ರೀಡೆ ಜಾತಿ ಮತ ಧರ್ಮದ ಸಂಕೋಲೆಯನ್ನು ಮೀರಿದ್ದಾಗಿದ್ದು ಇಲ್ಲಿ ಯಾವುದೇ ಭೇದವಿಲ್ಲದೆ ಎಲ್ಲರೂ ಒಂದೆಡೆ ಸೇರುವ ಸೌಹಾರ್ದಯುತ  ಸದ್ಭಾವನೆಯನ್ನು ಬೆಳೆಸಲು ಕ್ರೀಡೆ ಸಹಕಾರಿ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಬಿ. ಶೈಲಜಾ ಅಭಿಪ್ರಾಯ ಪಟ್ಟರು. ತಾ. ವನಕಲ್ಲು ಮಲ್ಲೇಶ್ವರ ಮಠದ ಜಾತ್ರೆ ಅಂಗವಾಗಿ ಹಮ್ಮಿಕೊಂಡಿದ್ದ ಸೈಕಲ್ ಜಾಥಕ್ಕೆ ಚಾಲನೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement