ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ರು. 1.80 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಬಾಲಕೃಷ್ಣ ಗುದ್ದಲಿ ಪೂಜೆ

Vishwanath S
Updated On : 6 Mar 2014, 1:04 am

ರಾಮನಗರ: ವಿದ್ಯಾರ್ಥಿ ನಿಲಯ ನಿರ್ಮಾಣ ಹಾಗೂ ರಸ್ತೆ ಡಾಂಬರೀಕರಣ ಸೇರಿದಂತೆ ಸುಮಾರು ರು.6 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಚ್.ಸಿ.ಬಾಲಕೃಷ್ಣ ಬುಧವಾರ ಚಾಲನೆ ನೀಡಿದರು.
ಬಿಡದಿ ಹೋಬಳಿಯ ಬನ್ನಿಕುಪ್ಪೆ ಗ್ರಾಪಂ ವ್ಯಾಪ್ತಿಯ ಸಿದ್ದಾಬೋವಿಪಾಳ್ಯದಲ್ಲಿ ಪ್ರಧಾನಮಂತ್ರಿಗಳ ಗ್ರಾಮ ಸಡಕ್ ಯೋಜನೆಯಡಿಯಲ್ಲಿ 1.10 ಕೋಟಿ ವೆಚ್ಚದಲ್ಲಿ ಮುತ್ತುರಾಯನಗುಡಿ ಪಾಳ್ಯ ಮಾರ್ಗವಾಗಿ ಬೆತ್ತನಗೆರೆವರೆಗೆ ರಸ್ತೆ ಡಾಂಬರೀಕರಣ, ರು.70 ಲಕ್ಷ ವೆಚ್ಚದಲ್ಲಿ ಬನ್ನಿಕುಪ್ಪೆ-ಮಲ್ಲಾತಹಳ್ಳಿ ಸಂಪರ್ಕ ರಸ್ತೆ ದುರಸ್ಥಿ ಕಾಮಗಾರಿಗಳು ಸೇರಿವೆ ಎಂದು ಅವರು ವಿವರಿಸಿದರು.
ಸಮಾಜಕಲ್ಯಾಣ ಇಲಾಖೆಯಿಂದ ಬೈರಮಂಗಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೊಡಿಯಾಲ ಕರೇನಹಳ್ಳಿಯಲ್ಲಿ ರು.2.45 ಕೋಟಿ ವೆಚ್ಚದ ಸಾರ್ವಜನಿಕ ವಿದ್ಯಾರ್ಥಿ ನಿಲಯಕ್ಕೆ ಶಂಕುಸ್ಥಾಪನೆ, ಬಿಡದಿ ಗ್ರಾ.ಪಂ. ವ್ಯಾಪ್ತಿಯ ಮೇಡನಹಳ್ಳಿ ಗ್ರಾಮದಲ್ಲಿ ರು.70 ಲಕ್ಷ ವೆಚ್ಚದ ಕಾಂಕ್ರಿಟ್ ರಸ್ತೆ, ಕೆಂಚನಕುಪ್ಪೆ ಗ್ರಾಪಂ ವ್ಯಾಪ್ತಿಯ ಕಲ್ಲುಗೋಪಹಳ್ಳಿಯಲ್ಲಿ 52 ಲಕ್ಷ ರು. ವೆಚ್ಚದ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಬಾಲಕೃಷ್ಣ ಭೂಮಿ ಪೂಜೆ ನೆರವೇರಿಸಿದರು.
ಜಿಪಂ ಸದಸ್ಯ ಎಚ್.ಎಲ್.ಚಂದ್ರು, ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ಬ್ಯಾಟಪ್ಪ, ಜಿಪಂ ಮಾಜಿ ಸದಸ್ಯ ಸಿ.ಹೆಚ್.ಪುಟ್ಟಯ್ಯ, ಮಂಚನಾಯಕನಹಳ್ಳಿ ಗ್ರಾ.ಪಂ. ಉಪಾಧ್ಯಕ್ಷ ಕೆಂಪಣ್ಣ, ಬನ್ನಿಕುಪ್ಪೆ ಗ್ರಾ.ಪಂ. ಮಾಜಿ ಅಧ್ಯಕ್ಷ ರಮೇಶ್, ಮುಖಂಡರಾದ ಸೋಮೇಗೌಡ, ಶ್ಯಾನುಮಂಗಲ ಶಂಕರ್ ಇತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement