ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಶುಲ್ಕ ಏರಿಕೆ ವಿರುದ್ಧ ಪ್ರತಿಭಟನೆ

Srinivasa Murthy VN
Updated On : 14 Mar 2014, 12:52 pm

ನೆಲಮಂಗಲ: ಬೆಂಗಳೂರು ವಿಶ್ವವಿದ್ಯಾನಿಲಯ ಪದವಿ ಪೂರ್ವ ಕಾಲೇಜುಗಳಲ್ಲಿ ಪರೀಕ್ಷಾ ಶುಲ್ಕ ಹೆಚ್ಚಿಸಿರುವುದನು ವಿರೋಧಿಸಿ ಎಬಿವಿಪಿಯ ನೂರಾರು ವಿದ್ಯಾರ್ಥಿಗಳು  ಪಟ್ಟಣದ ತಾಲೂಕು ಕಚೇರಿಯ ಮುಂಭಾಗದಲ್ಲಿ  ಗುರುವಾರ ಪ್ರತಿಭಟನೆ ನಡೆಸಿದರು.
ಈ ಹಿಂದೆ ಪರೀಕ್ಷಾ ಶುಲ್ಕ 187 ರು.ಗಳು ಇರುವ ಪದವಿಪೂರ್ವ ಕಾಲೇಜು ಪರೀಕ್ಷಾ ಶುಲ್ಕವನ 1,243 ರು.ಗಳಿಗೆ ಬೆಂಗಳೂರು ವಿಶ್ವವಿದ್ಯಾನಿಲಯ ಏಕಾಏಕಿ ಯಾವುದೇ ಮಾಹಿತಿ ನೀಡದೆ ಹೆಚ್ಚು ಮಾಡಿದ್ದು, ಸರ್ಕಾರಿ ಕಾಲೇಜು ಬಡ ವಿದ್ಯಾರ್ಥಿಗಳಿಗೆ ನುಂಗಲಾರದ ತುತ್ತಾಗಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಆತಂಕ ಉಂಟು ಮಾಡಿದ್ದು, ತಕ್ಷಣ ವಿಶ್ವವಿದ್ಯಾನಿಲಯ ಮಧ್ಯ ಪ್ರವೇಶಿಸಿ ಸೂಕ್ತ ತೀರ್ಮಾನವನ ಕೈಗೊಳ್ಳಬೇಕು, ಇಲ್ಲವಾದಲ್ಲಿ ನಗರದಾದ್ಯಂತ ಬೃಹತ್ ಪ್ರತಿಭಟನೆ ಕೈಗೊಳ್ಳುತ್ತೇವೆ ಎಂದು ಜಿಲ್ಲಾ ಸಂಚಾಲಕ ಸಂತೋಷ್ ಆಗ್ರಹಿಸಿದ್ದಾರೆ.
ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪೊಲೀಸರು ಪ್ರತಿಭಟನೆಯನ ಅರ್ಧಕ್ಕೆ ಕೈಬಿಡುವಂತೆ ವಿದ್ಯಾಥಿಗಳಿಗೆ ಸೂಚಿಸಿದ್ದು, ಈ ವಿಷಯವಾಗಿ ಪೊಲೀಸರು ಹಾಗೂ ವಿದ್ಯಾಥಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ಇದರ ನಡುವೆ ಎಬಿವಿಪಿ ವಿದ್ಯಾರ್ಥಿಗಳು ಉಪ ತಹಸೀಲ್ದಾರ್‌ಗೆ  ಮನವಿ ಸಲ್ಲಿಸುವ  ಮುಖಾಂತರ ಪ್ರತಿಭಟನೆಯನ ಪೂರ್ಣಗೊಳಿಸಿದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement